ಗುರುವಾರ , ಜುಲೈ 29, 2021
26 °C
ಕಾಮಗಾರಿ ವಿಳಂಬ: ಅಧಿಕಾರಿಗಳಿಗೆ ತರಾಟೆ

ಮೂರು ತಿಂಗಳಲ್ಲಿ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪೀಣ್ಯ ದಾಸರಹಳ್ಳಿ: 110 ಹಳ್ಳಿಗಳ ವ್ಯಾಪ್ತಿಗೆ ಒಳಪಡುವ ಬಾಗಲಗುಂಟೆ ಹಾಗೂ ಶೆಟ್ಟಿಹಳ್ಳಿ ವಾರ್ಡ್‌ಗಳಲ್ಲಿ ಪ್ರಗತಿಯಲ್ಲಿರುವ ಕಾವೇರಿ ನೀರು ಸರಬರಾಜು ಹಾಗೂ ಒಳಚರಂಡಿ ಕಾಮಗಾರಿಯನ್ನು ಶಾಸಕ ಆರ್‌.ಮಂಜುನಾಥ್‌ ಹಾಗೂ ಜಲಮಂಡಳಿ ಅಧ್ಯಕ್ಷ ತುಷಾರ್‌ ಗಿರಿನಾಥ್‌ ಮಂಗಳವಾರ ವೀಕ್ಷಿಸಿದರು.

‘ಕ್ಷೇತ್ರದಲ್ಲಿ ಆರು ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಮಾಡಲು ಕಾಮಗಾರಿ ನಡೆಯುತ್ತಿದೆ. ಆಮೆಗತಿಯ ಕಾಮಗಾರಿಯಿಂದಾಗಿ ಕಳೆದ ವರ್ಷ ಮಳೆಗಾಲದಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಈಗ ಕಾಮಗಾರಿ ಶೇ 70ರಷ್ಟು ಪೂರ್ಣಗೊಂಡಿದೆ. ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಮನೆ ಮನೆಗೆ ಕುಡಿಯುವ ನೀರು ಪೂರೈಸಬೇಕು’ ಎಂದು ಮಂಜುನಾಥ್‌ ಸೂಚಿಸಿದರು. ಕಾಮಗಾರಿ ವಿಳಂಬಕ್ಕೆ ಜಲಮಂಡಳಿಯ ಎಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡರು.

ತುಷಾರ್‌ ಗಿರಿನಾಥ್‌ ಪ್ರತಿಕ್ರಿಯಿಸಿ, ‘ಕುಡಿಯುವ ನೀರಿನ ಕಾಮಗಾರಿಗೆ ಇನ್ನಷ್ಟು ವೇಗ ನೀಡಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದರು. ಒಳಚರಂಡಿ ಕಾಮಗಾರಿಯನ್ನು ಡಿಸೆಂಬರ್‌ ಒಳಗೆ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

ಕುಡಿಯುವ ನೀರು ಪೂರೈಕೆಯ ಆಮೆಗತಿಯ ಕಾಮಗಾರಿಯಿಂದಾಗಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ‘ಪ್ರಜಾವಾಣಿ’ ಸರಣಿ ವರದಿಗಳನ್ನು ಪ್ರಕಟಿಸಿ ಗಮನ ಸೆಳೆದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು