ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಚಾಲನೆ

₹ 9.3 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭ
Last Updated 24 ಆಗಸ್ಟ್ 2020, 20:37 IST
ಅಕ್ಷರ ಗಾತ್ರ

ಕೆಂಗೇರಿ: ಕಾನ್‍ಕಾರ್ಡ್ ಬಡಾವಣೆಯಿಂದ ಕೃಷ್ಣ ಗಾರ್ಡನ್‍ವರೆಗಿನ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಗುದ್ದಲಿ ಪೂಜೆ ನೆರವೇರಿಸಿದರು.

ಇದೇ ವೇಳೆ ಮಾತನಾಡಿದ ಅವರು, ’ಮಳೆಗಾಲದಲ್ಲಿ ರಾಜಕಾಲುವೆಯಲ್ಲಿ ಹರಿಯುವ ನೀರಿನ ಪ್ರಮಾಣ ಹೆಚ್ಚಾಗಿ ಸುತ್ತಮುತ್ತಲ ಪ್ರದೇಶದ ಜನರು ತೊಂದರೆಗೀಡಾಗುವ ಸಾಧ್ಯತೆ ಇತ್ತು. ಹೀಗಾಗಿ ₹9.3 ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ಮನೆಗಳಿಗೆ ನೀರು ನುಗ್ಗುವ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ‘ ಎಂದು ಹೇಳಿದರು.

’ಶೀಘ್ರದಲ್ಲಿ ಕಾಮಗಾರಿ ಪೂರೈಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿಗೆ ಒತ್ತು ನೀಡುವಂತೆ ತಿಳಿಸಲಾಗಿದೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT