ಭಾನುವಾರ, ಆಗಸ್ಟ್ 1, 2021
20 °C

ಡಯಾಲಿಸಿಸ್ ಕೇಂದ್ರದ ಕಟ್ಟಡ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ಇಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಅತ್ಯಾಧುನಿಕ ನೂತನ ಶ್ರೀ ವಿಜಯ ಗಣಪತಿ ಡಯಾಲಿಸಿಸ್ ಕೇಂದ್ರದ ಕಟ್ಟಡ ಕಾಮಗಾರಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಭೂಮಿ ಪೂಜೆ ನೆರವೇರಿಸಿದರು.

ದಿವಂಗತ ವಕೀಲ ಹಾಗೂ ಜಮೀನ್ದಾರರಾದ ರಾಮಚಂದ್ರ ಅವರ ನೆನಪಿಗಾಗಿ ಸುಮಾರು ₹1.20 ಕೋಟಿ ವೆಚ್ಚದಲ್ಲಿ ಈ ಕಟ್ಟಡವನ್ನು ಕಟ್ಟಲಾಗುತ್ತಿದೆ.

‘ರಾಮಚಂದ್ರ ಅವರ ಪತ್ನಿ ಸುಶೀಲಾ ದೇವಿ ಅವರು ₹1.20 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಕರ್ಯಗಳ ಒಳಗೊಂಡ ಡಯಾಲಿಸ್ ಕಟ್ಟಡ ನಿರ್ಮಾಣ ಮಾಡಲು ಮುಂದೆ ಬಂದಿರುವುದು ಶ್ಲಾಘನೀಯ’ ಎಂದರು.

‘ರಾಮಚಂದ್ರಪ್ಪ ಕುಟುಂಬ ಅನೇಕ ಸಮಾಜ ಸೇವೆ ಮುಂದುವರಿಸಿಕೊಂಡು ಬರುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅವರ ಕುಟುಂಬಕ್ಕೆ ಸರ್ಕಾರದ ಪರವಾಗಿ ಧನ್ಯವಾದ’ ಎಂದರು.

‘ಮುಂದಿನ ದಿನಗಳಲ್ಲಿ ಈ ಆಸ್ಪತ್ರೆಯನ್ನು ಸುಮಾರು ₹30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದ್ದು, ಅವರು ಅನುದಾನ ನೀಡುವ ಭರವಸೆ ನೀಡಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು