ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗಸ್ಟ್ 30ರಂದು ಮೈಸೂರಿನಲ್ಲಿ 'ಗೃಹಲಕ್ಷ್ಮಿ'ಗೆ ಚಾಲನೆ: ಲಕ್ಷ್ಮಿ ಹೆಬ್ಬಾಳಕರ

Published 19 ಆಗಸ್ಟ್ 2023, 7:44 IST
Last Updated 19 ಆಗಸ್ಟ್ 2023, 7:44 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ'ಗೆ ಇದೇ 30ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.

ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ಶನಿವಾರ ನಡೆದ 'ನಮ್ಮೂರ ನಾಗಪಂಚಮಿ-2022' ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ ಎಂದರು.

ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಮೈಸೂರಿಗೆ ತೆರಳುತ್ತಿದ್ದು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT