ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕ: ಇ–ಆಡಳಿತ ಕಚೇರಿಗೆ ಚಾಲನೆ

Published 10 ಜನವರಿ 2024, 18:51 IST
Last Updated 10 ಜನವರಿ 2024, 18:51 IST
ಅಕ್ಷರ ಗಾತ್ರ

ಯಲಹಂಕ: ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ಸ್ಥಾಪಿಸಿರುವ ಇ–ಆಡಳಿತ ಕಚೇರಿಯನ್ನು ಶಾಸಕ ಎಸ್‌.ಆರ್‌. ವಿಶ್ವನಾಥ್‌ ಉದ್ಘಾಟಿಸಿದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ಇ–ಕಚೇರಿ ಆರಂಭಿಸಲಾಗಿದೆ. ಸಾರ್ವಜನಿಕರು ಕಂದಾಯ ಇಲಾಖೆಯ ವಿವಿಧ ವಿಭಾಗಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಇಲ್ಲಿ ಅರ್ಜಿ ಮತ್ತು ದೂರುಗಳನ್ನು ಸಲ್ಲಿಸಬಹುದು. ಈ ಅರ್ಜಿಗಳನ್ನು ಸ್ಕ್ಯಾನ್‌ಮಾಡಿ ಸಂಬಂಧಟ್ಟ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಮನೆಯಲ್ಲಿ ಕುಳಿತು ಮೊಬೈಲ್‌ನಲ್ಲೇ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ನೋಡಬಹುದು ಎಂದು ತಿಳಿಸಿದರು.

ಸಾರ್ವಜನಿಕರು ತಾಲ್ಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಇ–ಕಚೇರಿ ಆರಂಭಿಸಲಾಗಿದೆ. ಕಂದಾಯ ಇಲಾಖೆಯ ಕೆಲಸಗಳನ್ನು ಸರಳೀಕರಣಗೊಳಿಸುವುದರ ಜೊತೆಗೆ ಕಡತಗಳನ್ನು ಶೀಘ್ರ ವಿಲೇವಾರಿ ಮಾಡುವುದು ಇದರ ಮುಖ್ಯ ಉದ್ದೇಶ ಎಂದು ವಿವರಿಸಿದರು.

ತಹಶೀಲ್ದಾರ್‌ ಅನಿಲ್‌ಕುಮಾರ್‌ ಆರೋಲಿಕರ್‌, ವಿಶೇಷ ತಹಶೀಲ್ದಾರ್‌ ಶಿವಕುಮಾರ್‌, ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಒ. ರಮೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT