ಮಂಗಳವಾರ, ಆಗಸ್ಟ್ 16, 2022
21 °C

ಡ್ರಾಪ್ ನೆಪದಲ್ಲಿ ₹ 1 ಲಕ್ಷ ಸುಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ಬಾಲಮುರಳಿ ಎಂಬುವರನ್ನು ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

‘ಘಟನೆ ಸಂಬಂಧ ಬನಶಂಕರಿ ನಿವಾಸಿ ಬಾಲಮುರಳಿ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮಲ್ಲತ್ತಹಳ್ಳಿಯಲ್ಲಿ ಕೆಲಸ ಮಾಡುತ್ತಿರುವ ಬಾಲಮುರಳಿ, ನ. 17ರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗಲು ಮಾಳಗಾಳ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಅದೇ ವೇಳೆ ಕಾರಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು, ಬನಶಂಕರಿವರೆಗೆ ಡ್ರಾಪ್ ನೀಡುವುದಾಗಿ ಹೇಳಿ ಹತ್ತಿಸಿಕೊಂಡಿದ್ದರು.’

‘ನಾಯಂಡನಹಳ್ಳಿ ಸೇತುವೆ ಬಳಿ ಕಾರು ನಿಲ್ಲಿಸಿದ್ದ ಆರೋಪಿಗಳು, ಚಾಕು ತೋರಿಸಿ ಬೆದರಿಸಿ ಮೊಬೈಲ್ ಕಿತ್ತುಕೊಂಡಿದ್ದರು. ಜೇಬಿನಲ್ಲಿದ್ದ ₹ 2,500 ನಗದು ಸುಲಿಗೆ ಮಾಡಿದ್ದರು. ಮೊಬೈಲ್‌ನಲ್ಲಿದ್ದ ವಾಲೆಟ್ ಮೂಲಕ ₹ 1 ಲಕ್ಷವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದರು’ ಎಂದೂ ಪೊಲೀಸರು ತಿಳಿಸಿದರು.

‘ನೋಂದಣಿ ಸಂಖ್ಯೆ ಇಲ್ಲದ ಕಾರಿನಲ್ಲಿ ಆರೋಪಿಗಳು ಬಂದಿದ್ದರು. ಅವರ ಪತ್ತೆಗಾಗಿ, ಘಟನಾ ಸ್ಥಳದ ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.