ಶನಿವಾರ, ಆಗಸ್ಟ್ 24, 2019
27 °C

ಬರ ಪರಿಸ್ಥಿತಿ ಸಮಾಲೋಚನೆ: ಯಡಿಯೂರಪ್ಪ ಸಭೆ

Published:
Updated:

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಮಾಹಿತಿ ತಿಳಿದುಕೊಂಡು, ಪರಿಹಾರ ಕ್ರಮಗಳ ಕುರಿತು ಸಮಾಲೋಚನೆ ನಡೆಸುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಭೆ ಕರೆದಿದ್ದು, ವಿಧಾನಸೌಧದ ಸಮ್ಮೇಳನ ಸಭಾಂಗಣ ಸಜ್ಜಾಗುತ್ತಿದೆ.

ರಾಜ್ಯದ ಎಲ್ಲ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಗಳು ಸಭೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸಭೆ ಆರಂಭವಾಗಬೇಕು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈದರಾಬಾದ್ ಗೆ ಹೋದವರು ಈಗಷ್ಟೇ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಹೀಗಾಗಿ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಅವರು ಇದೇ 4 ಮತ್ತು 5ರಂದು ದೆಹಲಿಗೆ ತೆರಳಲಿದ್ದು, ಸಂಪುಟ ವಿಸ್ತರಣೆ ಕುರಿತು ಚರ್ಚಿಸುವರು. ಜತೆಗೆ ಬರ ಪರಿಹಾರಕ್ಕೆ ವಿಶೇಷ ಅನುದಾನ ದೊರಕಿಸುವ ನಿಟ್ಟಿನಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

Post Comments (+)