ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ವಸ್ತು ಜಾಲ: ಆಫ್ರಿಕಾ ಮೂಲದ ಆರೋಪಿ ಸೆನೆಗಲ್ ಜಾಮೀನು ರದ್ದು

Last Updated 11 ಸೆಪ್ಟೆಂಬರ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ಮಾದಕ ವಸ್ತು ಜಾಲ ಪ್ರಕರಣದಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್ ಆರೋಪಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ. ಹೊಸದಾಗಿ ವಿಚಾರಣೆ ನಡೆಸುವಂತೆ ಅಧೀನ ನ್ಯಾಯಾಲಯಕ್ಕೆ ತಿಳಿಸಿದೆ.

ಈ ಪ್ರಕರಣದಲ್ಲಿ ಸಿಸಿಬಿ ಪೊಲೀಸರು 2020ರ ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದ ಲೂಮ್ ಪೆಪ್ಪರ್ ಸಾಂಬಾ ಎಂಬುವವರಿಗೆ 2021ರ ಫೆಬ್ರುವರಿಯಲ್ಲಿ ಅಧೀನ ನ್ಯಾಯಾಲಯ ಜಾಮೀನು ನೀಡಿತ್ತು.

ಪಾಸ್‌ಪೋರ್ಟ್ ಅವಧಿ ಮುಕ್ತಾಯವಾಗಿದ್ದರೂ ದೇಶದಲ್ಲೇ ಉಳಿದುಕೊಂಡು ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ. ಈ ವಿಷಯವನ್ನು ಅಧೀನ ನ್ಯಾಯಾಲಯ ಪರಿಗಣಿಸಿಲ್ಲ ಎಂದು ರಾಜ್ಯ ಸರ್ಕಾರದ ಪರ ವಕೀಲರು ವಾದಿಸಿದರು.

ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯಲ್ಲಿ ಕೈಗೊಂಡ ತೀರ್ಮಾನವನ್ನೇ ಈ ಪ್ರಕರಣದಲ್ಲೂ ಕೈಗೊಳ್ಳಲು ಆಗುವುದಿಲ್ಲ ಎಂದು ಹೇಳಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಪೀಠ, ಜಾಮೀನು ರದ್ದುಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT