ಮಂಗಳವಾರ, ಡಿಸೆಂಬರ್ 1, 2020
19 °C

ಡ್ರಗ್ಸ್ ಜಾಲ ಪ್ರಕರಣ: ಬಿನೀಶ್ ಕೊಡಿಯೇರಿ ಎನ್‌ಸಿಬಿ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Bineesh

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕವಿಟ್ಟುಕೊಂಡಿದ್ದ ಎನ್ನಲಾದ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರ ಮಗ ಬಿನೀಶ್‌ನನ್ನು ರಾಷ್ಟ್ರೀಯ ಮಾದಕ ದ್ರವ್ಯ ನಿಗ್ರಹ ದಳದ (ಎನ್‌ಸಿಬಿ) ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಸಿನಿ ತಾರೆಯರು, ಉದ್ಯಮಿಗಳು ಸೇರಿದಂತೆ ಹಲವು ಗಣ್ಯರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದಡಿ ಕೆಲ ಆರೋಪಿಗಳನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಆ ಪೈಕಿ ಆರೋಪಿ ಅನೂಪ್‌ ಎಂಬಾತನ ಜೊತೆ ಹಣಕಾಸಿನ ವ್ಯವಹಾರ ನಡೆಸಿದ್ದ ಆರೋಪದಡಿ ಬಿನೀಶ್‌ನನ್ನು ಬಂಧಿಸಿದ್ದ ಇ.ಡಿ ಅಧಿಕಾರಿಗಳು, ಆತನನ್ನು ಕಸ್ಟಡಿಗೆ ಪಡೆದಿದ್ದರು. ಕಸ್ಟಡಿ ಅವಧಿ ಮುಗಿದಿದ್ದರಿಂದ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ‘ಡ್ರಗ್ಸ್ ಪ್ರಕರಣದಲ್ಲೂ ಬಿನೀಶ್ ಭಾಗಿಯಾಗಿರುವ ಅನುಮಾನವಿದೆ. ಆತನನ್ನು ವಿಚಾರಣೆಗೆ ಒಳಪಡಿಸಬೇಕಿದ್ದು, ಕಸ್ಟಡಿಗೆ ನೀಡಿ’ ಎಂದು ಎನ್‌ಸಿಬಿ ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದರು.

ಅರ್ಜಿ ಪುರಸ್ಕರಿಸಿದ ನ್ಯಾಯಾಲಯ, ನ. 20ರವರೆಗೆ ಬಿನೀಶ್‌ನನ್ನು ಎನ್‌ಸಿಬಿ ಕಸ್ಟಡಿಗೆ ಒಪ್ಪಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು