ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ಪೆಡ್ಲರ್‌ ಬಂಧನ: ₹8.40 ಲಕ್ಷದ ಮಾದಕವಸ್ತು ಜಪ್ತಿ

Published 2 ಜನವರಿ 2024, 14:36 IST
Last Updated 2 ಜನವರಿ 2024, 14:36 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಗ್ರಾಹಕರಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ದೊಮ್ಮಲೂರು ನಿವಾಸಿ ಭರತ್‌ ಬಂಧಿತ ಆರೋಪಿ. ‘ಬಂಧಿತ ಆರೋಪಿಯಿಂದ ₹8.40 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟಲ್‌, ಮಾದಕ ವಸ್ತುಗಳಿದ್ದ ಮಾತ್ರೆ, ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

‘ಹೊಸ ವರ್ಷದ ಪಾರ್ಟಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು’ ಎಂದು ತಿಳಿಸಿದರು.

‘ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದಾಗ ಆರೋಪಿಯನ್ನು ಬಂಧಿಸಲಾಗಿದೆ. ಅಕ್ರಮವಾಗಿ ಹಣ ಸಂಪಾದಿಸುವ ಉದ್ದೇಶದಿಂದ ನಿಷೇಧಿತ ಮಾದಕ ಪಿಲ್ಸ್​ಗಳು ಮತ್ತು ಗಾಂಜಾವನ್ನು ಸ್ಥಳೀಯ ಡ್ರಗ್ಸ್‌ ಪೆಡ್ಲರ್‌ಗಳಿಂದ ಖರೀದಿಸಿ, ಪರಿಚಯಸ್ಥ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ’ ಎಂದು ತಿಳಿಸಿದರು.

ಆರೋಪಿಯ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT