ಶನಿವಾರ, ಸೆಪ್ಟೆಂಬರ್ 18, 2021
30 °C

ಬೆಂಗಳೂರು: ₹2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರನ್ನು ಬಂಧಿಸಿದ ಸಿಸಿಬಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಾರ್ಕ್‌ನೆಟ್ ಜಾಲತಾಣಗಳ ಮೂಲಕ ಡ್ರಗ್ಸ್ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹2 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

'ವೈಟ್‌ಫೀಲ್ಡ್ ವಿಭಾಗದಲ್ಲಿ ಕಾರ್ಯಾಚರಣೆ ನಡೆಸಿ ಹೊರ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ವಿದೇಶದಿಂದ ಡ್ರಗ್ಸ್ ತರಿಸಿ ಮಾರುತ್ತಿದ್ದರು' ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

 

'ಬಾಡಿಗೆ ಮನೆಯಲ್ಲಿ ವಾಸವಿದ್ದ ಆರೋಪಿಗಳು, ಅದೇ ಮನೆಯಲ್ಲೇ ಡ್ರಗ್ಸ್ ಸಂಗ್ರಹಿಸಿಟ್ಟುಕೊಂಡಿದ್ದರು. ಎಂಡಿಎಂಎ, ಎಕ್ಸೈ‌ಟೆಸ್ಸಿ ಮಾತ್ರೆಗಳು, ಗಾಂಜಾ ಎಣ್ಣೆ ಹಾಗೂ ಇತರೆ ಡ್ರಗ್ಸ್ ಮನೆಯಲ್ಲಿತ್ತು' ಎಂದೂ  ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು