ಸೋಮವಾರ, ಜನವರಿ 25, 2021
14 °C

ಅಂತರರಾಜ್ಯ ಪೆಡ್ಲರ್‌ಗಳ ಬಂಧನ: ₹ 15 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಡ್ರಗ್ಸ್ ಮಾರಾಟ ಹಾಗೂ ಸಾಗಣೆ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ನಗರದ ಸಿಸಿಬಿ ಪೊಲೀಸರು, ಮತ್ತೊಂದು ಡ್ರಗ್ಸ್ ಮಾರಾಟ ಜಾಲವನ್ನು ಭೇದಿಸಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಠಾಣೆಯ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರು ಅಂತರರಾಜ್ಯ ಪೆಡ್ಲರ್‌ಗಳನ್ನು ಬಂಧಿಸಿರುವ ಪೊಲೀಸರು, ₹ 15 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

'ಕೇರಳದ ರಮೇಶ್ (28), ಎಂ.ಸಿ.ಆಶೀರ್ (32) ಹಾಗೂ ಶಹಾಜೀನ್ (19) ಬಂಧಿತರು. 200 ಗ್ರಾಂ ತೂಕದ ಎಂಡಿಎಂಎ, 150 ಗ್ರಾಂ ತೂಕದ ಹ್ಯಾಶಿಷ್ ಎಣ್ಣೆ ಹಾಗೂ ಮೂರು ಮೊಬೈಲ್ ಜಪ್ತಿ ಮಾಡಲಾಗಿದೆ' ಎಂದು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು‌.

'ಹೊರರಾಜ್ಯಗಳಿಂದ ಡ್ರಗ್ಸ್ ತರುತ್ತಿದ್ದ ಆರೋಪಿಗಳು, ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿ ಉದ್ಯೋಗಿಗಳಿಗೆ ಮಾರುತ್ತಿದ್ದರು. ಎಲೆಕ್ಟ್ರಾನಿಕ್ ಸಿಟಿ ಬಳಿ ಡ್ರಗ್ಸ್ ಮಾರಾಟ ಮಾಡಲು ಬಂದಿದ್ದ ಸಂದರ್ಭದಲ್ಲಿ  ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.'

'ಕರ್ನಾಟಕ, ಕೇರಳ ಹಾಗೂ ಇತರೆ ರಾಜ್ಯಗಳಲ್ಲೂ ಆರೋಪಿಗಳು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಾಹಿತಿ ಇದೆ. ತನಿಖೆ ಮುಂದುವರಿದಿದೆ' ಎಂದೂ ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು