ಮಂಗಳವಾರ, ನವೆಂಬರ್ 24, 2020
27 °C

ಡ್ರಗ್ಸ್‌ ಪೆಡ್ಲರ್ ಬಂಧನ; 500 ಗ್ರಾಂ ಹೈಡ್ರೊ ಗಾಂಜಾ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಾರ್ಕ್ ನೆಟ್ ಜಾಲತಾಣ ಮೂಲಕ ಡ್ರಗ್ಸ್ ಖರೀದಿಸಿ ನಗರಕ್ಕೆ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಆರೋಪದಡಿ ಸುಜಯ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗಷ್ಟೇ 10 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಜಾಲದಲ್ಲಿರುವ ಮತ್ತಷ್ಟು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

'ಆರೋಪಿ ಸುಜಯ್, ವಿದೇಶದಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ಬಿಟ್ ಕಾಯಿನ್ ಮೂಲಕ ಹಣ ಪಾವತಿ ಮಾಡುತ್ತಿದ್ದ. ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದ. ಆತ
ನಿಂದ ₹15 ಲಕ್ಷ ಮೌಲ್ಯದ 500 ಗ್ರಾಂ ಹೈಡ್ರೊ ಗಾಂಜಾ ಜಪ್ತಿ ಮಾಡಲಾಗಿದೆ' ಎಂದು ಪೊಲೀಸರು ಹೇಳಿದರು.

‘ಸುಜಯ್ ಜೊತೆಯಲ್ಲಿ ಮತ್ತಷ್ಟು ಡ್ರಗ್ಸ್ ಪೆಡ್ಲರ್‌ಗಳ ಹೆಸರು ಕೇಳಿಬಂದಿದೆ. ಸದ್ಯ ಅವರೆಲ್ಲರೂ ತಲೆಮರೆಸಿಕೊಂಡಿದ್ದಾರೆ. ಇವರೆಲ್ಲ ಡ್ರಗ್ಸ್ ಮಾರಾಟದಿಂದ ಹಣ ಗಳಿಕೆ ಮಾಡುತ್ತಿದ್ದರು’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.