ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಮಾದಕ ವಸ್ತು ಮಾರಾಟ: ಆರೋಪಿ ಬಂಧನ

Published 6 ಜೂನ್ 2024, 14:43 IST
Last Updated 6 ಜೂನ್ 2024, 14:43 IST
ಅಕ್ಷರ ಗಾತ್ರ

ಬೆಂಗಳೂರು: ಮಾದಕ ವಸ್ತುಗಳನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೆಣ್ಣೂರು ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಹಲಸೂರಿನ ಎಚ್‌ಎಎಲ್‌ 2ನೇ ಹಂತದ ಹನುಮಯ್ಯ ರಸ್ತೆಯ ನಿವಾಸಿ ಅಭಿಷೇಕ್‌ (23) ಬಂಧಿತ ಆರೋಪಿ.

‘ಆರೋಪಿಯಿಂದ 21 ಗ್ರಾಂ ಎಂಡಿಎಂಎ, ಮೊಬೈಲ್‌ ಹಾಗೂ ಬೈಕ್ ಜಪ್ತಿ ಮಾಡಿಕೊಳ್ಳಲಾಗಿದೆ. ಪೆಡ್ಲರ್‌ಗಳಿಂದ ಆರೋಪಿ, ಡ್ರಗ್ಸ್‌ ಖರೀದಿಸಿ ಹಲವು ಗ್ರಾಹಕರಿಗೆ ಪೂರೈಸುತ್ತಿದ್ದ. ಎಂಡಿಎಂಎ ಸೇರಿದಂತೆ ಇತರೆ ಮಾದಕ ವಸ್ತುಗಳನ್ನು ದಾಸ್ತಾನು ಮಾಡಿಕೊಂಡಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT