ಬೆಂಗಳೂರು: ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ ಕ್ರಿಸ್ಟಲ್ ಹಾಗೂ ಗಾಂಜಾ ಮಾರುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವರದರಾಜನಗರದ ಶೇಖ್ ಅಲಿ (47), ಶೇಖ್ ಸನ್ಮಾನ್ (24), ವಿಲ್ಸನ್ ಗಾರ್ಡನ್ ಮುಜಾಮಿಲ್ (34) ಹಾಗೂ ಲಕ್ಷ್ಮಿನಾರಾಯಣ ಪುರದ ವಿ.ಎಚ್.ವಿನೋದ್ ಕುಮಾರ್ (28) ಬಂಧಿತ ಆರೋಪಿಗಳು.

‘ಬಂಧಿತರಿಂದ 2 ಕೆ.ಜಿ ಗಾಂಜಾ, 56 ಗ್ರಾಂ ಎಂಡಿಎಂಎ ಕ್ರಿಸ್ಟಲ್, ₹ 2.39 ಲಕ್ಷ ನಗದು, ಎರಡು ಮೊಬೈಲ್, ಎರಡು ದ್ವಿಚಕ್ರ ವಾಹನ ಸೇರಿದಂತೆ ಒಟ್ಟು ₹ 9 ಲಕ್ಷ ಮೌಲ್ಯ ವಸ್ತು ಜಪ್ತಿ ಮಾಡಲಾಗಿದೆ’ ಎಂದು ಮೂಲಗಳು ಹೇಳಿವೆ.

‘ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಾಲೇಜು ವಿದ್ಯಾರ್ಥಿಗಳು ಹಾಗೂ ವ್ಯಸನಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು. ಒಂದು ಗ್ರಾಂ ಎಂಡಿಎಂಎ ಅನ್ನು ₹ 8 ಸಾವಿರದಿಂದ ₹ 10 ಸಾವಿರಕ್ಕೆ ಹಾಗೂ 10 ಗ್ರಾಂ ಗಾಂಜಾವನ್ನು ₹ 1 ಸಾವಿರದಿಂದ ₹ 2 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.