ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮಂಗಳೂರಿನ ಡ್ರಗ್ಸ್ ಪೆಡ್ಲರ್ ಸೇರಿ ಇಬ್ಬರನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಬಬ್ಬುಕಟ್ಟೆಯ ಸದಾಲತ್ ಉಲ್ಲಾ ಅಬ್ದುಲ್ ರಜಾಕ್(40) ಮತ್ತು ಫರ್ವೇಜ್(32) ಬಂಧಿತರು.

ಆರೋಪಿಗಳಿಂದ ₹25 ಲಕ್ಷ ಮೌಲ್ಯದ 225 ಗ್ರಾಂ. ತೂಕದ ಎಂಡಿಎಂಎ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ರಾಚೇನಹಳ್ಳಿ ಕೆರೆ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ಹೇಳಿದರು.

ಫರ್ವೇಜ್ ಎಂಬಾತ ಅಬ್ದುಲ್ ರಜಾಕ್ನಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸಿ ನಗರಕ್ಕೆ ತಂದು ಸಾಫ್ಟ್ವೇರ್ ಎಂಜಿನಿಯರ್ ಹಾಗೂ ಪೇಯಿಂಗ್ ಗೆಸ್ಟ್ನಲ್ಲಿ ನೆಲಸಿದ್ದವರಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

ಆರೋಪಿಗಳ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.