ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಿ, ಹಣ ಸಂಪಾದಿಸುತ್ತಿದ್ದ ವಿದೇಶಿ ಪ್ರಜೆಯನ್ನು ಆವಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲೈಬೀರಿಯಾದ ಕೌಂದೆ ಪ್ರಿನ್ಸ್ (30) ಎಂಬುವರನ್ನು ಬಂಧಿಸಿ, ₹1.07 ಕೋಟಿ ಮೌಲ್ಯದ 537 ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ.

ಎಂಜಿನಿಯರಿಂಗ್ ಪದವೀಧರನಾಗಿರುವ ಆರೋಪಿ, ವ್ಯಾವಹಾರಿಕ ವೀಸಾದ ಅಡಿ ಭಾರತಕ್ಕೆ ಬಂದಿದ್ದು, ಸದ್ಯ ವೀಸಾ ಅವಧಿ ಮುಕ್ತಾಯಗೊಂಡಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿ ವಾಸವಿದ್ದ ಕಮ್ಮಸಂದ್ರ ವೃತ್ತದಲ್ಲಿರುವ ಸ್ಪ್ರಿಂಗ್ಫೀಲ್ಡ್ ಬಡಾವಣೆಯ ಆನಂದ ಕುಮಾರ್ ಅವರ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದರು.

ದಾಳಿ ವೇಳೆ ವಿವಿಧ ಬಣ್ಣದ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಂಡು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈತನ ವಿರುದ್ಧ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ.

‘ಎಲ್ಲಿಂದ ಮಾದಕ ವಸ್ತು ಪೂರೈಕೆ ಆಗುತ್ತಿತ್ತು ಹಾಗೂ ಇದರ ಹಿಂದೆ ಯಾರು ಇದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಆರೋಪಿಯ ವೀಸಾ ಅವಧಿ ಮುಕ್ತಾಯಗೊಂಡಿದ್ದು, ಯಾವುದೇ ಕೆಲಸ ಮಾಡುತ್ತಿಲ್ಲ. ಅಪರಿಚಿತ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಖರೀದಿಸಿ, ಪರಿಚಿತರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿರುವುದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.