ಬೆಂಗಳೂರು: ಗಡಿಪಾರು ಮಾಡಿದ ನಂತರವೂ ಭಾರತಕ್ಕೆ ಬಂದು ಮಾದಕವಸ್ತು ಮಾರಾಟ ಮಾಡುತ್ತಿದ್ದ ಘಾನಾ ದೇಶದ ಪ್ರಜೆಯನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿ, ₹52.15 ಲಕ್ಷ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಆರೋಪಿ ಒವುಸು ಕಾಲಿನ್ಸ್ (35) ಬಂಧಿತ ಆರೋಪಿ.

ವೈದ್ಯಕೀಯ ವೀಸಾ ಪಡೆದು ಭಾರತಕ್ಕೆ ಬಂದಿದ್ದ ಆರೋಪಿ, ಮಾದಕವಸ್ತುಗಳ ಮಾರಾಟದಲ್ಲಿ ತೊಡಗಿದ್ದ. ಈ ಹಿಂದೆ ಆರೋಪಿಯನ್ನು ಬಂಧಿಸಿದ್ದ ಮಾರತ್ ಹಳ್ಳಿ ಠಾಣೆ ಪೊಲೀಸರು ಭಾರತದಿಂದ ಗಡಿಪಾರು ಮಾಡಿದ್ದರು. ಆದರೆ ವಾಪಸ್ ಬಂದಿದ್ದ ಆರೋಪಿ, ಮತ್ತೊಬ್ಬ ವಿದೇಶಿ ಪ್ರಜೆಯಿಂದ ಕಡಿಮೆ ಬೆಲೆಗೆ ಮಾದಕವಸ್ತುಗಳನ್ನು ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ₹52.15 ಲಕ್ಷ ಮೌಲ್ಯದ 416 ಗ್ರಾಂ ಎಂಡಿಎಂ, ಕಾರು, ದ್ವಿಚಕ್ರ ವಾಹನ, ತೂಕದ ಯಂತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.