ಭಾನುವಾರ, ಅಕ್ಟೋಬರ್ 25, 2020
26 °C

ಡ್ರಗ್ಸ್; ಮತ್ತೊಬ್ಬ ಆರೋಪಿ ಚಿಕ್ಕಮಗಳೂರಿನಲ್ಲಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು; ಡ್ರಗ್ಸ್ ಜಾಲ ಪ್ರಕರಣದ ಮತ್ತೊಬ್ಬ ಆರೋಪಿ ಆಶ್ವಿನ್ ಬೋಗಿ ಎಂಬಾತನನ್ನು ಸಿಸಿಬಿ ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.

ಅಂತರರಾಷ್ಟ್ರೀಯ ಡ್ರಗ್ಸ್ ಜಾಲದ ಬಗ್ಗೆ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಅಶ್ವಿನ್ ತಲೆಮರೆಸಿಕೊಂಡಿದ್ದ. ಆತನಿಗಾಗಿ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದರು.

'ಖಚಿತ ಮಾಹಿತಿ ಮೇರೆಗೆ ಚಿಕ್ಕಮಗಳೂರಿಗೆ ಹೋಗಿದ್ದ ವಿಶೇಷ ತಂಡ, ಆರೋಪಿ ಆಶ್ವಿನ್‌ನನ್ನು ಬಂಧಿಸಿ ನಗರಕ್ಕೆ ಕರೆತಂದಿದೆ. ಹೆಚ್ಚಿನ ವಿಚಾರಣೆಗಾಗಿ ಆತನನ್ನು ಕಸ್ಟಡಿಗೆ ಪಡೆಯಲಾಗುವುದು' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು