‘ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ರಮೇಶ್ (38) ಹಾಗೂ ರವಿಕುಮಾರ್ (25) ಎಂಬುವರನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ. ಅವರಿಬ್ಬರಿಂದ 4 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ. ಬಾಣಸವಾಡಿಯಲ್ಲಿ ಮುದಾಸೀರ್ ಎಂಬುವರನ್ನು ಬಂಧಿಸಿ 1 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸಂತೋಷ್ ಎಂಬಾತನನ್ನು ಬಂಧಿಸಿ, 150 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳು, ಚಿಕ್ಕ ಪೊಟ್ಟಣಗಳಲ್ಲಿ ಗಾಂಜಾವನ್ನು ಹಾಕಿ ಮಾರುತ್ತಿದ್ದರು’ ಎಂದು ಡಿಸಿಪಿ ಎಸ್.ಡಿ.ಶರಣಪ್ಪ ಹೇಳಿದರು