ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್: 25 ಮಂದಿ ಬಂಧನ

ಸಾರ್ವಜನಿಕರಿಂದ ದೂರು: ಕಾರ್ಯಾಚರಣೆ
Last Updated 13 ಮಾರ್ಚ್ 2020, 22:03 IST
ಅಕ್ಷರ ಗಾತ್ರ

ಬೆಂಗಳೂರು: ಮಾದಕ ವಸ್ತು ಸಾಗಣೆ ಹಾಗೂ ಮಾರಾಟ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಪೂರ್ವ ವಿಭಾಗದ ಪೊಲೀಸರು, 25 ಮಂದಿಯನ್ನು ಬಂಧಿಸಿದ್ದಾರೆ.

ರಾಮಮೂರ್ತಿನಗರ, ಬಾಣಸವಾಡಿ ಹಾಗೂ ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು.

‘ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ರಮೇಶ್ (38) ಹಾಗೂ ರವಿಕುಮಾರ್ (25) ಎಂಬುವರನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ. ಅವರಿಬ್ಬರಿಂದ 4 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ. ಬಾಣಸವಾಡಿಯಲ್ಲಿ ಮುದಾಸೀರ್ ಎಂಬುವರನ್ನು ಬಂಧಿಸಿ 1 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸಂತೋಷ್ ಎಂಬಾತನನ್ನು ಬಂಧಿಸಿ, 150 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳು, ಚಿಕ್ಕ ಪೊಟ್ಟಣಗಳಲ್ಲಿ ಗಾಂಜಾವನ್ನು ಹಾಕಿ ಮಾರುತ್ತಿದ್ದರು’ ಎಂದು ಡಿಸಿಪಿ ಎಸ್‌.ಡಿ.ಶರಣಪ್ಪ ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT