ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ ₹ 3 ಲಕ್ಷ ಮೌಲ್ಯದ ಎಕ್ಸೈಟೆಸ್ಸಿ ಮಾತ್ರೆಗಳನ್ನು ಜಪ್ತಿ ಮಾಡಿದ್ದಾರೆ.
‘ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ನೈಜೀರಿಯಾ ಪ್ರಜೆ, ವೀಸಾ ಅವಧಿ ಮುಗಿದರೂ ವಾಪಸು ದೇಶಕ್ಕೆ ಹೋಗಿರಲಿಲ್ಲ. ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಆತ ಏಪ್ರಿಲ್‌ನಲ್ಲಿ ಜೈಲಿಗೂ ಹೋಗಿದ್ದ. ಜಾಮೀನು ಮೇಲೆ ಹೊರಬಂದಿದ್ದ ಆತ, ಪುನಃ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ. ಈತನ ಕೃತ್ಯಕ್ಕೆ ಸ್ಥಳೀಯ ನಿವಾಸಿಯೂ ಸಹಕಾರ ನೀಡುತ್ತಿದ್ದ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.
‘ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಡ್ರಗ್ಸ್ ಮಾರಲು ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಯಿತು. ಅವರಿಬ್ಬರ ದ್ವಿಚಕ್ರ ವಾಹನಗಳು ಹಾಗೂ ಮೊಬೈಲ್‌ಗಳನ್ನೂ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.
‘ತಮ್ಮದೇ ಜಾಲ ರಚಿಸಿಕೊಂಡಿದ್ದ ಆರೋಪಿಗಳು, ಅದರ ಮೂಲಕ ಡ್ರಗ್ಸ್ ಮಾರುತ್ತಿದ್ದರು. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿಗಳ ಉದ್ಯೋಗಿಗಳು ಹಾಗೂ ಇತರರು ಆರೋಪಿಗಳ ಬಳಿ ಡ್ರಗ್ಸ್ ಖರೀದಿಸುತ್ತಿದ್ದರು. ಗ್ರಾಹಕರ ಹೇಳಿಕೆ ಪಡೆಯಲು ಪ್ರಯತ್ನಿಸಲಾಗುತ್ತಿದೆ’ ಎಂದೂ ವಿವರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.