ಬೆಂಗಳೂರು: ಎಚ್ಬಿಆರ್ ಲೇಔಟ್ನ ನಡುರಸ್ತೆಯಲ್ಲೇ ಚಾಲಕನೊಬ್ಬ ತನ್ನ ಕಾರು ನಿಲ್ಲಿಸಿಕೊಂಡು ಡ್ರಗ್ಸ್ ಮತ್ತೇರಿಸಿಕೊಂಡಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

2ನೇ ಹಂತದ 8ನೇ ಮುಖ್ಯರಸ್ತೆಯಲ್ಲಿ ಕಾರು(ಕೆಎ 03 ಎಡಿ 1997) ನಿಲ್ಲಿಸಿದ್ದ ಚಾಲಕ, ಪೊಟ್ಟಣದಲ್ಲಿದ್ದ ಡ್ರಗ್ಸ್ ವಾಸನೆ ತೆಗೆದುಕೊಳ್ಳುತ್ತಿದ್ದ. ಇದನ್ನು ಸ್ಥಳೀಯ ನಿವಾಸಿಯೊಬ್ಬರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಅದೇ ವಿಡಿಯೊವನ್ನು ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿ, ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಇದಕ್ಕೆ ತ್ವರಿತವಾಗಿ ಸ್ಪಂದಿಸಿದ ಕೆ.ಜೆ.ಹಳ್ಳಿ ಪೊಲೀಸರು, ಸ್ಥಳಕ್ಕೆ ಹೋಗಿ ನಿವಾಸಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ವಿಡಿಯೊ ಮಾಡುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿರುವ ಚಾಲಕನ ಮಾಹಿತಿ ಸದ್ಯಕ್ಕೆ ಗೊತ್ತಾಗಿಲ್ಲ.

ಕಾರಿನಲ್ಲಿ ಕುಳಿತಿದ್ದ ಚಾಲಕ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದ. ಆತನನ್ನು ಪ್ರಶ್ನಿಸುವುದಕ್ಕಾಗಿ ಸ್ಥಳೀಯರೊಬ್ಬರು ವಿಡಿಯೊ ಮಾಡುತ್ತಲೇ ಕಾರಿನ ಬಳಿ ಹೋಗಿದ್ದರು. ಅವರನ್ನು ನೋಡುತ್ತಿದ್ದಂತೆ ಚಾಲಕ ಕಾರು ಸಮೇತ ಪರಾರಿಯಾಗಿದ್ದಾನೆ. ಈ ದೃಶ್ಯ ವಿಡಿಯೊದಲ್ಲಿ ಸೆರೆ ಆಗಿದೆ.

‘ಕಮ್ಮನಹಳ್ಳಿ, ಎಚ್ಬಿಆರ್ ಲೇಔಟ್, ಬಾಣಸವಾಡಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಇದರ ತಡೆಗೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.