ಬುಧವಾರ, ಮಾರ್ಚ್ 3, 2021
29 °C

1 ಕೆ.ಜಿ. ಅಪೀಮು ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು, 1 ಕೆ.ಜಿ 25 ಗ್ರಾಂ ತೂಕದ ಅಪೀಮು ಜಪ್ತಿ ಮಾಡಿದ್ದಾರೆ.

‘ಕೆ. ರಾಜುರಾಮ್ ಹಾಗೂ ಉತ್ತಮ್ ಬಂಧಿತರು. ಮೆಜೆಸ್ಟಿಕ್ ಬಸ್ ನಿಲ್ದಾಣ ಸಮೀಪದಲ್ಲಿರುವ ಆಯುರ್ವೇದಿಕ್ ಆಸ್ಪತ್ರೆ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ನಿಂತಿದ್ದ ಆರೋಪಿಗಳು, ಗ್ರಾಹಕರಿಗೆ ಅಪೀಮು ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ನಡೆಸಲಾಯಿತು’ ಎಂದು ಪೊಲೀಸರು ಹೇಳಿದರು.

‘ಆರೋಪಿಗಳು ಹಲವು ತಿಂಗಳಿ ನಿಂದ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಾಹಿತಿ ಇದೆ. ಅಫೀಮು ಎಲ್ಲಿಂದ ತಂದಿದ್ದರು ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದೂ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು