ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 20 ಲಕ್ಷ ಮೌಲ್ಯದ ಅಫೀಮು ಜಪ್ತಿ

Last Updated 29 ಜುಲೈ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜಸ್ಥಾನದಿಂದ ಅಫೀಮು ಖರೀದಿಸಿ ತಂದು ನಗರದಲ್ಲಿ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

‘ರಾಜಸ್ಥಾನದ ಪಾಲಿ ಜಿಲ್ಲೆಯ ಅಮರ ರಾಮ್ (32) ಹಾಗೂ ಮೋತಿಲಾಲ್ (48) ಬಂಧಿತರು. ಅವರಿಂದ ₹ 20 ಲಕ್ಷ ಮೌಲ್ಯದ 1 ಕೆ.ಜಿ ಅಫೀಮು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ಆರೋಪಿಗಳು, ಆರಂಭದಲ್ಲಿ ಸಣ್ಣಪುಟ್ಟ ಕೆಲಸ ಮಾಡುತ್ತಿದ್ದರು. ಆರೋಪಿ ಅಮರ ರಾಮ್, ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನೆಲೆಸಿದ್ದ. ಇನ್ನೊಬ್ಬ ಆರೋಪಿ ಮೋತಿಲಾಲ್, ಚಿಕ್ಕಬಾಣಾವರದಲ್ಲಿ ವಾಸವಿದ್ದ.’

‘ಅಕ್ರಮವಾಗಿ ಹಣ ಗಳಿಸಲು ಮುಂದಾಗಿದ್ದ ಆರೋಪಿಗಳು, ಮಾದಕ ವಸ್ತು ಮಾರಾಟಕ್ಕೆ ಇಳಿದಿದ್ದರು. ರಾಜಸ್ಥಾನದಲ್ಲಿದ್ದ ಪೆಡ್ಲರ್‌ ಕಡೆಯಿಂದ ಅಫೀಮು ಖರೀದಿಸಿ ನಗರಕ್ಕೆ ತರುತ್ತಿದ್ದರು. ನಗರದ ಕೆಲ ಪೇಯಿಂಗ್ ಗೆಸ್ಟ್‌ ಕಟ್ಟಡದಲ್ಲಿರುವ ಯುವಕ, ಯುವತಿಯರು ಹಾಗೂ ಕೆಲ ಕಂಪನಿಗಳ ಉದ್ಯೋಗಿಗಳಿಗೆ ಮಾರುತ್ತಿದ್ದರು’ ಎಂದೂ ಪೊಲೀಸರು ತಿಳಿಸಿದರು.

‘ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದ ಆನಂದರೆಡ್ಡಿ ಲೇಔಟ್‌ಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿಗಳು, ಅಫೀಮು ಮಾರಲು ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT