ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಜಾಲ: ವಸ್ತ್ರವಿನ್ಯಾಸಕ ರಮೇಶ್‌ಗೆ ಸಿಸಿಬಿ ನೋಟಿಸ್

ಬಂಧಿತ ಆರೋಪಿಗಳ ಜತೆ ಹೆಚ್ಚು ಒಡನಾಟ
Last Updated 25 ಸೆಪ್ಟೆಂಬರ್ 2020, 22:58 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ಜತೆ ಖ್ಯಾತ ವಸ್ತ್ರ ವಿನ್ಯಾಸಕ ರಮೇಶ್ ಡೆಂಬ್ಲ ಅವರು ಹೆಚ್ಚು
ಒಡನಾಟವಿಟ್ಟುಕೊಂಡಿದ್ದ ಮಾಹಿತಿ ಸಿಸಿಬಿಗೆ ಸಿಕ್ಕಿದ್ದು, ಅದರ ಆಧಾರದಲ್ಲಿ ಅವರಿಗೆ ಗುರುವಾರ ನೋಟಿಸ್ ನೀಡಲಾಗಿದೆ.

‘ಡ್ರಗ್ಸ್ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ನಿಮ್ಮ ವಿಚಾರಣೆ ನಡೆಸಿ ಹೇಳಿಕೆ ಪಡೆಯಬೇಕಿದೆ. ಹೀಗಾಗಿ, ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಶನಿವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆಗಾಗಿ ಹಾಜರಾಗಬೇಕು’ ಎಂದು ವಾಟ್ಸ್‌ಆ್ಯಪ್‌ನಲ್ಲಿ ಕಳುಹಿಸಿರುವ ನೋಟಿಸ್‌ನಲ್ಲಿ ಸಿಸಿಬಿ ಅಧಿಕಾರಿ ತಿಳಿಸಿರುವುದಾಗಿ ಗೊತ್ತಾಗಿದೆ.

‘ಡ್ರಗ್ಸ್ ಜಾಲ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ದೆಹಲಿಯ ವೀರೇನ್ ಖನ್ನಾ, ಆದಿತ್ಯ ಆಳ್ವ ಹಾಗೂ ಕೇರಳದ ರೂಪದರ್ಶಿ ನಿಯಾಜ್‌ ಜತೆ ರಮೇಶ್ ಅವರು ಒಡನಾಟ ಹೊಂದಿದ್ದರು. ಅವರ ಜೊತೆಯಲ್ಲಿ ಹಲವು ಪಾರ್ಟಿಗಳಲ್ಲೂ ಪಾಲ್ಗೊಂಡಿದ್ದರು’ ಎಂದು ಸಿಸಿಬಿ ಮೂಲಗಳು ಮಾಹಿತಿ ನೀಡಿವೆ.

‘ರಮೇಶ್ ಹಾಗೂ ಆರೋಪಿಗಳ ನಡುವಿನ ಸಂಬಂಧದ ಬಗ್ಗೆ ಮಾಹಿತಿ ಪಡೆಯಬೇಕಿದೆ. ಜೊತೆಗೆ, ಅವರು ಪಾಲ್ಗೊಂಡಿದ್ದ ಪಾರ್ಟಿಗಳ ಬಗ್ಗೆಯೂ ಲಿಖಿತ ಹೇಳಿಕೆ ಬೇಕಿದೆ. ಹೀಗಾಗಿ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಈ ವೇಳೆ ಅವರು ನೀಡುವ ಹೇಳಿಕೆಯನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT