ಶುಕ್ರವಾರ, ಡಿಸೆಂಬರ್ 4, 2020
22 °C

ಡ್ರಗ್ಸ್‌: ಆರೋಪಿಗಳ ಪತ್ತೆಗೆ ಲುಕ್‌ಔಟ್ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಭೇದಿಸಿ ನಟಿಯರು ಸೇರಿ ಹಲವರನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಸಿಸಿಬಿ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ದೆಹಲಿಯ ವಿರೇನ್ ಖನ್ನಾ, ಬಿ.ಕೆ. ರವಿಶಂಕರ್ ಹಾಗೂ ಹಲವರನ್ನು ಈಗಾಗಲೇ ಬಂಧಿಸಲಾಗಿದೆ. ಶಿವಪ್ರಕಾಶ್, ಆದಿತ್ಯ ಆಳ್ವ, ಅಭಿಷೇಕ್ ಸೇರಿದಂತೆ ಹಲವರು ತಲೆಮರೆಸಿಕೊಂಡಿದ್ದಾರೆ.

‘ಶಿವಪ್ರಕಾಶ್ ಹಾಗೂ ಆದಿತ್ಯ ಆಳ್ವ ಪತ್ತೆಗಾಗಿ ಈಗಾಗಲೇ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿತ್ತು. ಇದೀಗ ಉಳಿದೆಲ್ಲ ಆರೋಪಿಗಳ ಪತ್ತೆಗೆ ನೋಟಿಸ್‌ ಜಾರಿ ಮಾಡಲಾಗಿದೆ. ರಾಜ್ಯದ ಎಲ್ಲ ಠಾಣೆಗಳಿಗೆ, ಹೊರ ರಾಜ್ಯಗಳ ಠಾಣೆಗಳಿಗೆ ಹಾಗೂ ವಿಮಾನ ನಿಲ್ದಾಣಗಳಿಗೆ ಮಾಹಿತಿ ಕಳುಹಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ‘ಆರೋಪಿಗಳು ದೇಶದಲ್ಲೇ ಇರುವ ಮಾಹಿತಿ ಇದೆ. ಅವರು ವಿದೇಶಕ್ಕೆ ಹೋಗುವ ಸಾಧ್ಯತೆ ಇರುವುದರಿಂದ ಈ ನೋಟಿಸ್‌ ಹೊರಡಿಸಲಾಗಿದೆ’ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು