ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫೀಮು ಜಪ್ತಿ; ಆರೋ‍ಪಿ ಬಂಧನ

Last Updated 29 ಜೂನ್ 2021, 21:36 IST
ಅಕ್ಷರ ಗಾತ್ರ

ಬೆಂಗಳೂರು: ಸಿಟಿ ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ಅಫೀಮು ಮಾರುತ್ತಿದ್ದ ಆರೋಪದಡಿ ಬೇರಾರಾಮ್ (33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ನಾಯಂಡನಹಳ್ಳಿ ಸಿ.ವಿ. ಗಾರ್ಡನ್‌ ನಿವಾಸಿ ಬೇರಾರಾಮ್, ಗ್ರೈನ್ ಬಜಾರ್‌ ಬಳಿ ಡ್ರಗ್ಸ್ ಮಾರುತ್ತಿದ್ದ. ದಾಳಿ ಮಾಡಿ ಆತನನ್ನು ಬಂಧಿಸಲಾಗಿದೆ. 1 ಕೆ.ಜಿ. 50 ಗ್ರಾಂ ಅಫೀಮು, ಮೊಬೈಲ್ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಹಲವು ತಿಂಗಳಿನಿಂದ ಆರೋಪಿ ಕೃತ್ಯ ಎಸಗುತ್ತಿದ್ದ. ಕೆಲ ಕಾಲೇಜು ವಿದ್ಯಾರ್ಥಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು, ಕೆಲ ಕಾರ್ಮಿಕರು ಆರೋಪಿ ಬಳಿ ಅಫೀಮು ಖರೀದಿಸುತ್ತಿದ್ದರು ಎಂಬುದು ಗೊತ್ತಾಗಿದೆ. ಡ್ರಗ್ಸ್ ಮಾರಾಟದಿಂದಲೇ ಹಣ ಗಳಿಸುತ್ತಿದ್ದ ಆರೋಪಿ, ಐಷಾರಾಮಿ ಜೀವನಕ್ಕೆ ಖರ್ಚು ಮಾಡುತ್ತಿದ್ದ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT