ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಪ್ರಕರಣ: ಮಸ್ತಾನ್ ರಕ್ತ, ಮೂತ್ರ ಪರೀಕ್ಷೆ

Last Updated 6 ಮಾರ್ಚ್ 2021, 21:43 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ವಶಕ್ಕೆ ಪಡೆಯಲಾಗಿದ್ದ ಬಿಗ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಮಸ್ತಾನ್ ಚಂದ್ರ ಅವರನ್ನು ರಕ್ತ ಹಾಗೂ ಮೂತ್ರ ಪರೀಕ್ಷೆಗೆ ಒಳಪಡಿಸಲಾಗಿದೆ.

ಡ್ರಗ್ಸ್ ಮಾರಾಟ ಆರೋಪದಡಿ ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ್ದ ಪೂರ್ವ ವಿಭಾಗದ ಪೊಲೀಸರು, ₹ 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದರು. ಆರೋಪಿಗಳು ನೀಡಿದ್ದ ಮಾಹಿತಿ ಆಧರಿಸಿ ಮಸ್ತಾನ್ ಮನೆ ಮೇಲೆ ಶುಕ್ರವಾರ ದಾಳಿ ಮಾಡಿದ್ದರು.

ಮಸ್ತಾನ್‌ ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು. ಶನಿವಾರ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದ ಪೊಲೀಸರು, ವೈದ್ಯರ ಮೂಲಕ ರಕ್ತ ಹಾಗೂ ಮೂತ್ರ ಸಂಗ್ರಹಿಸಿದರು.

‘ಮಸ್ತಾನ್‌ ಅವರು ಡ್ರಗ್ಸ್ ಸೇವನೆ ಮಾಡುತ್ತಿದ್ದ ಮಾಹಿತಿ ಇದೆ. ವೈದ್ಯಕೀಯ ಪರೀಕ್ಷೆ ನಡೆಸಿ ಅವರನ್ನು ಠಾಣೆಯಿಂದ ಕಳುಹಿಸಲಾಗಿದೆ. ಪುನಃ ವಿಚಾರಣೆಗೆ ಬರುವಂತೆ ಹೇಳಲಾಗಿದೆ. ವೈದ್ಯಕೀಯ ಪರೀಕ್ಷೆ ವರದಿ ಬಂದ ನಂತರ ಮುಂದಿ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT