ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಬ್‌ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದವರ ಬಂಧನ

Last Updated 23 ಅಕ್ಟೋಬರ್ 2021, 17:04 IST
ಅಕ್ಷರ ಗಾತ್ರ

ಬೆಂಗಳೂರು: ಪಬ್‌ ಹಾಗೂ ಪಾರ್ಟಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲವನ್ನು ಎನ್‌ಸಿಬಿ (ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ) ಅಧಿಕಾರಿಗಳು ಭೇದಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.

‘ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ತಮ್ಮದೇ ತಂಡ ಕಟ್ಟಿಕೊಂಡು ಆರೋಪಿಗಳು ಡ್ರಗ್ಸ್ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ’ ಎಂದು ಎನ್‌ಸಿಬಿ ವಲಯ ನಿರ್ದೇಶಕ ಅಮಿತ್ ಘಾವಟೆ ಹೇಳಿದರು.

‘ವಿಶಾಖಪಟ್ಟಣ, ಬಿಹಾರ ಹಾಗೂ ಹೈದರಾಬಾದ್ ನಿವಾಸಿಗಳಾದ ನಾಲ್ವರು ಆರೋಪಿಗಳು, ಸ್ವಿಫ್ಟ್‌ ಕಾರಿನಲ್ಲಿ ಬೆಂಗಳೂರಿಗೆ ಡ್ರಗ್ಸ್ ತರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ದೇವನಹಳ್ಳಿ ಟೋಲ್‌ಗೇಟ್‌ ಬಳಿ ಕಾರು ತಡೆದು ಪರಿಶೀಲಿಸಲಾಯಿತು. ಬಟ್ಟೆಗಳಲ್ಲಿ ಬಚ್ಚಿಟ್ಟಿದ್ದ ಡ್ರಗ್ಸ್ ಪತ್ತೆಯಾಯಿತು’ ಎಂದೂ ತಿಳಿಸಿದರು.

‘ಬೆಂಗಳೂರಿನಿಂದ ಡ್ರಗ್ಸ್ ತೆಗೆದುಕೊಂಡು ಆರೋಪಿಗಳು ಆಂಧ್ರಪ್ರದೇಶದತ್ತ ಹೊರಟಿದ್ದರು. ಹೈದರಾಬಾದ್‌ನಲ್ಲಿರುವ ಪಬ್‌ಗಳು ಹಾಗೂ ಹಲವೆಡೆ ಪಾರ್ಟಿಗಳಿಗೆ ಡ್ರಗ್ಸ್‌ ಪೂರೈಸುವ ಉದ್ದೇಶವಿಟ್ಟುಕೊಂಡಿದ್ದರು. ಎಂಡಿಎಂಎ ಮಾತ್ರೆಗಳು ಹಾಗೂ ಮೆಥಾಂಫೆಟಮೈನ್ ಡ್ರಗ್ಸ್ ಆರೋಪಿಗಳ ಬಳಿ ಸಿಕ್ಕಿವೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT