₹ 10 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ: ಬಂಧನ

ಬೆಂಗಳೂರು: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾದ ಇಫ್ಯಾನಯಿ ವೋಚೊಲ್ವೊ ಮೈಕ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಆರೋಪಿ, ಹಲವು ತಿಂಗಳಿನಿಂದ ಡ್ರಗ್ಸ್ ಮಾರುತ್ತಿದ್ದ. ಆತನಿಂದ ₹ 10 ಲಕ್ಷ ಮೌಲ್ಯದ ಡ್ರಗ್ಸ್ ಹಾಗೂ ಕಾರು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.
‘ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಆರೋಪಿ ಡ್ರಗ್ಸ್ ತರಿಸುತ್ತಿದ್ದ. ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ’ ಎಂದೂ ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.