ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್- ಸಿಎಂ ಮನೆ ಭದ್ರತಾ ಸಿಬ್ಬಂದಿ ಬಂಧನ: ಮಹಿಳೆ ಸೇರಿ ಮೂವರ ಬಂಧನ

Last Updated 27 ಜನವರಿ 2022, 21:24 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಮನೆಯ ಭದ್ರತಾ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸರನ್ನು ಬಂಧಿಸಿದ್ದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಡ್ರಗ್ಸ್ ಪೂರೈಕೆಯಲ್ಲಿ ಭಾಗಿಯಾಗಿದ್ದರು ಎನ್ನಲಾದ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ.

‘ಆರ್‌.ಟಿ.ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿ ನಡೆಸುತ್ತಿದೆ. ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಹೆಡ್‌ ಕಾನ್‌ಸ್ಟೆಬಲ್ ಸಂತೋಷ್ ಹಾಗೂ ಕಾನ್‌ಸ್ಟೆಬಲ್‌ ಶಿವಕುಮಾರ್‌ ಅವರನ್ನು ಇತ್ತೀಚೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು‘ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪದಡಿ ಒಡಿಶಾದ ಪೂಜಾ, ನಾಗಪುರದ ಶಿವ್ ಪಾಟೀಲ ಹಾಗೂ ತಮಿಳುನಾಡಿನ ಸೋಮಸುಂದರಂ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ 5 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ‘ ಎಂದೂ ತಿಳಿಸಿವೆ. ‘ಎಸ್‌.ಜಿ. ಪಾಳ್ಯದಲ್ಲಿ ವಾಸವಿದ್ದ ಆರೋಪಿಗಳು, ಆಡುಗೋಡಿ ಆಟೊ ಚಾಲಕ ಹಾಗೂ ಆತನ ಸ್ನೇಹಿತನ ಜೊತೆ ಒಡನಾಟ ಹೊಂದಿದ್ದರು. ಎಲ್ಲರೂ ಸಂಘಟಿತರಾಗಿ ಡ್ರಗ್ಸ್ ಮಾರುತ್ತಿದ್ದರು. ಇದಕ್ಕೆ ಇಬ್ಬರು ಪೊಲೀಸರು ಸಹಕಾರ ನೀಡುತ್ತಿದ್ದರು’ ಎಂದೂ ಮೂಲಗಳು ಹೇಳಿವೆ. ‘ಪ್ರಕರಣದಲ್ಲಿ ಇದುವರೆಗೂ 11 ಮಂದಿಯನ್ನು ಬಂಧಿಸಿದಂತಾಗಿದೆ. ಮತ್ತಷ್ಟು ಮಂದಿ ಡ್ರಗ್ಸ್ ಮಾರಾಟದಲ್ಲಿ ಭಾಗಿಯಾಗಿದ್ದು, ಅವರನ್ನು ಪತ್ತೆ ಮಾಡಲಾಗುತ್ತಿದೆ‘ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT