ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್: ಆರೋಪಿಯ ₹1.60 ಕೋಟಿ ಆಸ್ತಿ ಮುಟ್ಟುಗೋಲು

Last Updated 17 ಸೆಪ್ಟೆಂಬರ್ 2022, 20:05 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಸಾಗಣೆ ಹಾಗೂ ಮಾರಾಟ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದ ಆರೋಪಿ ಮೃತ್ಯುಂಜಯ ಅಲಿಯಾಸ್ ಜಯಣ್ಣ (53) ಎಂಬುವರು ಗಳಿಸಿದ್ದ ₹ 1.60 ಕೋಟಿ ಮೌಲ್ಯದ ಆಸ್ತಿಯನ್ನು ಸಿಸಿಬಿ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

‘ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಜೋಡಿಪುರದ ಮೃತ್ಯುಂ ಜಯ, 2007ರಿಂದಲೇ ಗಾಂಜಾ ಹಾಗೂ ಹಶೀಷ್ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ. ಎನ್‌ಡಿಪಿಎಸ್ ಕಾಯ್ದೆಯಡಿ ಈತನ ವಿರುದ್ಧ 9 ಪ್ರಕರಣಗಳು ದಾಖಲಾಗಿದ್ದವು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

‘ಡ್ರಗ್ಸ್ ಮಾರಾಟದಿಂದಲೇ ಆರೋಪಿ, ಸಾಕಷ್ಟು ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿದ್ದ. ಈತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಂಬಂಧ ಚೆನ್ನೈನ ಸಕ್ಷಮ ಪ್ರಾಧಿಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇದರನ್ವಯ ಕ್ರಮ ಕೈಗೊಂಡು ₹ 1.60 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದೂ ತಿಳಿಸಿದರು.

‘ಹೊಸಕೋಟೆ ಪಟ್ಟಣದಲ್ಲಿರುವ ನಿವೇಶನ, ಕೋಲಾರ ಜಿಲ್ಲೆಯ ಜೋಡಿಪುರ ಹಾಗೂ ಕಂಬಿಪುರದಲ್ಲಿರುವ ಜಮೀನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ವಿವಿಧ ಬ್ಯಾಂಕ್‌ ಗಳಲ್ಲಿರುವ 6 ಖಾತೆಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.

₹5 ಕೋಟಿ ಅಕ್ರಮ ವಹಿವಾಟು: ‘ಆರೋಪಿ ಮೃತ್ಯುಂಜಯ, ಪತ್ನಿ ಭಾಗಮ್ಯ ಹೆಸರಿನಲ್ಲಿ ₹ 5 ಕೋಟಿ ವಹಿವಾಟು ನಡೆಸಿದ್ದಾನೆ. ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ತೆರಿಗೆಗಳನ್ನು ಸರ್ಕಾರಕ್ಕೆ ತುಂಬಿಲ್ಲ. ಇದೊಂದು ಅಕ್ರಮ ವಹಿವಾಟು ಎಂಬುದು ತಿಳಿದಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT