ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಮಾರಾಟ: ಇಬ್ಬರ ಬಂಧನ

Last Updated 10 ಜೂನ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಮಾರಾಟದ ವಿರುದ್ಧ ಪ್ರತ್ಯೇಕ ಕಾರ್ಯಾಚರಣೆ ನಡೆಸಿರುವ ಯಲಹಂಕ ಹಾಗೂ ಸಿಸಿಬಿ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

‘ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ಆಫ್ರಿಕಾ ಪ್ರಜೆ ಜಾನ್ ಅಬ್ರಾಹಂ ಎಂಬಾತನನ್ನು ಬಂಧಿಸಲಾಗಿದೆ. ಈತನಿಂದ 1 ಕೆ.ಜಿ 455 ಗ್ರಾಂ ಎಂಡಿಎಂಎ, 6 ಕೆ.ಜಿ 530 ಗ್ರಾಂ ಗಾಂಜಾ, 7 ಮೊಬೈಲ್, ದ್ವಿಚಕ್ರ ವಾಹನ ಹಾಗೂ ₹ 28,000 ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಬಂಧಿತ ಜಾನ್‌ ಡ್ರಗ್ಸ್‌ ಮಾರುತ್ತಿದ್ದ. ಈತನ ಜೊತೆ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ’ ಎಂದೂ ಹೇಳಿದರು.

₹ 3 ಲಕ್ಷ ಮೌಲ್ಯದ ಡ್ರಗ್ಸ್: ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ಚೂಟು ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ ₹ 3 ಲಕ್ಷ ಮೌಲ್ಯದ 5 ಕೆ.ಜಿ 30 ಗ್ರಾಂ ಗಾಂಜಾ ಹಾಗೂ ಮೊಬೈಲ್ ಜಪ್ತಿ ಮಾಡಿದ್ದಾರೆ.

‘ಹೊಸಕೋಟೆಯಲ್ಲಿ ಸುತ್ತಾಡುತ್ತಿದ್ದ ಆರೋಪಿ, ಪರಿಚಯಸ್ಥರಿಗೆ ಗಾಂಜಾ ಮಾರುತ್ತಿದ್ದ. 10 ಗ್ರಾಂ ಗಾಂಜಾಕ್ಕೆ ₹300ರಿಂದ ₹500 ನಿಗದಿಪಡಿಸಿದ್ದ. ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಖಾಸಗಿ ಕಂಪನಿಗಳ ಉದ್ಯೋಗಿಗಳು ಕಾಯಂ ಗ್ರಾಹಕರಾಗಿದ್ದರು’ ಎಂದು ಸಿಸಿಬಿ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT