ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಮಾರಾಟ: ತಾಂಜೇನಿಯಾ ಯುವತಿ ಬಂಧನ

Last Updated 16 ಜೂನ್ 2022, 16:30 IST
ಅಕ್ಷರ ಗಾತ್ರ

ಬೆಂಗಳೂರು: ಕಮ್ಮನಹಳ್ಳಿ ಜಲವಾಯು ವಿಹಾರ ಬಳಿ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ತಾಂಜೇನಿಯಾ ಯುವತಿ ಫಾತಿಮಾ ಒಮರೈ (30) ಅವರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

‘ಪ್ರವಾಸ ವೀಸಾದಡಿ 2018ರಲ್ಲಿ ನಗರಕ್ಕೆ ಬಂದಿದ್ದ ಫಾತಿಮಾ, ಅವಧಿ ಮುಗಿದರೂ ತಮ್ಮ ದೇಶಕ್ಕೆ ವಾಪಸು ಹೋಗಿರಲಿಲ್ಲ. ಮಹದೇವಪುರದ ಬಿ.ನಾರಾಯಣಪುರದ ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ವಾಸವಿದ್ದಳು’ ಎಂದು ಪೊಲೀಸರು ಹೇಳಿದರು.

‘ಜೂನ್ 15ರಂದು ಮಧ್ಯಾಹ್ನ ಕಮ್ಮನಹಳ್ಳಿ ಜಲವಾಯು ವಿಹಾರ ಬಳಿ ನಿಂತಿದ್ದ ಆರೋಪಿ, ಪರಿಚಿತ ಗ್ರಾಹಕರಿಗೆ ಡ್ರಗ್ಸ್ ಮಾರಲು ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ಈಕೆಯಿಂದ ₹ 1.50 ಲಕ್ಷ ಮೌಲ್ಯದ 13 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

‘ಡ್ರಗ್ಸ್ ಮಾರಾಟವನ್ನೇ ವೃತ್ತಿ ಮಾಡಿಕೊಂಡಿದ್ದ ಫಾತಿಮಾ, ಇದರಿಂದ ಹಣ ಸಂಪಾದಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು. ಈಕೆಯ ವಿರುದ್ಧ ಡಿ.ಜೆ.ಹಳ್ಳಿ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT