ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಮಾರಾಟ: ಪೆಡ್ಲರ್ ವಿರುದ್ಧ ಗೂಂಡಾ ಕಾಯ್ದೆ ಮಾದರಿ ಕ್ರಮ –ಪೊಲೀಸ್ ಕಮಿಷನರ್

Published 28 ಜನವರಿ 2024, 0:50 IST
Last Updated 28 ಜನವರಿ 2024, 0:50 IST
ಅಕ್ಷರ ಗಾತ್ರ

ಬೆಂಗಳೂರು: ‘ಡ್ರಗ್ಸ್ ಮಾರಾಟದಲ್ಲಿ ಭಾಗಿಯಾಗುವ ಪೆಡ್ಲರ್‌ಗಳ ವಿರುದ್ಧ ಗೂಂಡಾ ಕಾಯ್ದೆ ಮಾದರಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದರು.

ದೊಡ್ಡಕಲ್ಲಸಂದ್ರದ ಶಂಕರ್ ಫೌಂಡೇಷನ್‌ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಜನರ ದೂರುಗಳನ್ನು ಆಲಿಸಿ ಅವರು ಮಾತನಾಡಿದರು.

‘ಡ್ರಗ್ಸ್ ಮಾರಾಟ ಹಾಗೂ ಸೇವನೆ ಪ್ರಮಾಣ ಹೆಚ್ಚಾಗುತ್ತಿದೆ. ಯುವ ಜನತೆ ಡ್ರಗ್ಸ್ ವ್ಯಸನಿಗಳಾಗಿ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಡ್ರಗ್ಸ್ ಜಾಲವನ್ನು ಬುಡ ಸಮೇತ ಕಿತ್ತೊಗೆಯಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಕಮಿಷನರ್, ‘ಗೂಂಡಾ ಕಾಯ್ದೆ ಮಾದರಿಯಲ್ಲಿ ಪೆಡ್ಲರ್‌ಗಳನ್ನು ಬಂಧಿಸಿ ಜೈಲಿಗಟ್ಟಲು ಕಾನೂನಿನಲ್ಲಿ ಅವಕಾಶವಿದೆ. ಇದರಡಿ ಪೆಡ್ಲರ್‌ಗಳನ್ನು ಮಟ್ಟಹಾಕಲಾಗುವುದು’ ಎಂದರು.

ಧ್ವನಿವರ್ಧಕ ಬಳಕೆ: ‘ಪ್ರಮುಖ ರಸ್ತೆ ಹಾಗೂ ಜಂಕ್ಷನ್‌ಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಜೊತೆಯಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಲಾಗುತ್ತಿದೆ. ಠಾಣೆಯಲ್ಲಿ ಕುಳಿತ ಸಿಬ್ಬಂದಿ, ಕ್ಯಾಮೆರಾ ದೃಶ್ಯಗಳನ್ನು ವೀಕ್ಷಿಸಿ ಧ್ವನಿವರ್ಧಕ ಮೂಲಕವೇ ಸೂಚನೆಗಳನ್ನು ನೀಡಲಿದ್ದಾರೆ’ ಎಂದು ಕಮಿಷನರ್ ಹೇಳಿದರು.

ಸಭೆಯಲ್ಲಿ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ಕುಮಾರ್ ಶಹಾಪುರವಾಡ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT