ಗುರುವಾರ , ಅಕ್ಟೋಬರ್ 1, 2020
20 °C

ಸಿನಿ ತಾರೆಯರಿಗೆ ಡ್ರಗ್ ಪೂರೈಸುತ್ತಿದ್ದ ಆಫ್ರಿಕಾ ಪ್ರಜೆ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ ಜಾಲದ ತನಿಖೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ಕೆಲ ಸಿನಿ ತಾರೆಯರಿಗೆ ಹಾಗೂ ಇತರರಿಗೆ ಡ್ರಗ್ ಪೂರೈಸುತ್ತಿದ್ದ ಆರೋಪದಡಿ ಆಫ್ರಿಕಾದ ಲೌಮ್ ಪೆಪ್ಪೆರ್ ಸಾಂಬಾ ಎಂಬಾತನನ್ನು ಶನಿವಾರ ಬಂಧಿಸಿದ್ದಾರೆ.

ಡ್ರಗ್ ಜಾಲದಲ್ಲಿ ಭಾಗಿಯಾಗಿದ್ದ ಆರೋಪದಡಿ ನಟಿ ರಾಗಿಣಿ, ಅವರ ಸ್ನೇಹಿತ ರವಿ ಶಂಕರ್ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದೆ.

ಇದನ್ನೂ ಓದಿ... ಡ್ರಗ್ ಮಾಫಿಯಾ: ಸಿಸಿಬಿ ಪೊಲೀಸರಿಂದ ನಟಿ ರಾಗಿಣಿ ದ್ವಿವೇದಿ ಬಂಧನ

ಬಂಧಿತ ಆರೋಪಿಗಳು, ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಅದರ ಆಧಾರದಲ್ಲೇ ಹಲವರ ಬಂಧನಕ್ಕೆ ಸಿಸಿಬಿ ಬಲೆ ಬೀಸಿದೆ.

‘ಆಫ್ರಿಕಾ ಪ್ರಜೆ ಲೌಮ್‌ನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ರವಿ ಶಂಕರ್ ಹಾಗೂ ಕೆಲ ಸಿನಿ ತಾರೆಯರಿಗೆ ಆತ ಡ್ರಗ್ ಸರಬರಾಜು ಮಾಡುತ್ತಿದ್ದ ಮಾಹಿತಿ ಸಿಕ್ಕಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು‌.

ಇದನ್ನೂ ಓದಿ... ರಾತ್ರೋರಾತ್ರಿ ಮೊಬೈಲ್ ಬದಲಾಯಿಸಿದ ರಾಗಿಣಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು