ಶುಕ್ರವಾರ, ಅಕ್ಟೋಬರ್ 23, 2020
24 °C

ಡ್ರಗ್ಸ್ ಜಾಲ: ಬೆಂಗಳೂರಿನಲ್ಲಿ ಮತ್ತೊಬ್ಬ ಯುವತಿ ಸಿಸಿಬಿ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾದ ಆರೋಪದಡಿ ಸಂಗೀತಾ ದಂತಕುಡಿ ಎಂಬುವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಪೆಡ್ಲರ್‌ ಜೊತೆಯಲ್ಲಿ ಸಂಪರ್ಕವಿಟ್ಟುಕೊಂಡು ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪ ಸಂಗೀತಾ ಅವರ ಮೇಲಿದೆ. ಸದಾಶಿವನಗರದಲ್ಲಿ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರಲ್ಲಿರುವ ಸಂಗೀತಾ ಫ್ಲ್ಯಾಟ್‌ ಮೇಲೆ ದಾಳಿ ಮಾಡಿ ಅವರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಸಂಗೀತಾ ವಿಚಾರಣೆ ನಡೆಯುತ್ತಿದೆ. ದಿವಂಗತ ಮುತ್ತಪ್ಪ ರೈ ಜೊತೆಯಲ್ಲೂ ಸಂಗೀತಾ ಗುರುತಿಸಿಕೊಂಡಿದ್ದರು. ಮುಂಬೈನಲ್ಲಿದ್ದ ಕೆಲ ಪೆಡ್ಲರ್‌ಗಳ ಜೊತೆಯಲ್ಲಿ ಒಡನಾಟ ಇಟ್ಟುಕೊಂಡಿದ್ದರು ಎಂಬ ಮಾಹಿತಿ ಸಿಸಿಬಿಗೆ ಸಿಕ್ಕಿತ್ತು.

ಇದನ್ನೂ ಓದಿ...

ಡ್ರಗ್ಸ್ ಪ್ರಕರಣ| ರಾಗಿಣಿ, ಸಂಜನಾ ಜಾಮೀನು ಅರ್ಜಿ ತಿರಸ್ಕೃತ: ಮುಂದುವರಿದ ಜೈಲುವಾಸ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು