ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದ ವಿಚಾರಣೆಗೆ ಎರಡನೇ ಬಾರಿ ಪ್ರಿಯಾಂಕಾ ಆಳ್ವ ಗೈರಾಗಿದ್ದಾರೆ.

ಕಾಟನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿ ಆದಿತ್ಯ ಆಳ್ವ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ. ಆತನ ಬಗ್ಗೆ ಮಾಹಿತಿ ಕಲೆಹಾಕಲು ಸಹೋದರಿ ಪ್ರಿಯಾಂಕಾ ಅವರಿಗೆ ಸಿಸಿಬಿ ಪೊಲೀಸರು ಅ. 16ರಂದು ನೋಟಿಸ್ ನೀಡಿದ್ದರು.

ಮೊದಲ ಬಾರಿಗೆ ಪ್ರಿಯಾಂಕಾ ವಿಚಾರಣೆಗೆ ಗೈರಾಗಿದ್ದರು. ಹೀಗಾಗಿ, ಅ. 20ರಂದು ವಿಚಾರಣೆಗೆ ಬರು
ವಂತೆ ಎರಡನೇ ಬಾರಿ ನೋಟಿಸ್ ನೀಡಲಾಗಿತ್ತು. ಆದರೆ, ಪ್ರಿಯಾಂಕಾ ಮಂಗಳವಾರವೂ ವಿಚಾರಣೆಗೆ ಹಾಜರಾಗಿಲ್ಲ.

‘ಪ್ರಿಯಾಂಕಾ ಹಾಗೂ ಪತಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮುಂಬೈನ ಮನೆ ಮೇಲೆ ಇತ್ತೀಚೆಗೆ ದಾಳಿ ಮಾಡಲಾಗಿತ್ತು. ಎನ್ಡಿಪಿಎಸ್ ಕಾಯ್ದೆಯಡಿ ಎರಡು ಬಾರಿ ಪ್ರಿಯಾಂಕಾ ಅವರಿಗೆ ನೋಟಿಸ್ ನೀಡಿದರೂ ಪ್ರತಿಕ್ರಿಯೆ ಬಂದಿಲ್ಲ. ಕಾನೂನು ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಸಿಬಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.