ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಜಾಲದ ತನಿಖೆ ಮಾಹಿತಿ ಸೋರಿಕೆ: ಎಸಿಪಿ ಮುಧವಿ ಅಮಾನತು

Last Updated 23 ಸೆಪ್ಟೆಂಬರ್ 2020, 13:26 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಪ್ರಕರಣ ತನಿಖೆಯ ಮಾಹಿತಿ ಸೋರಿಕೆ ಮಾಡಿರುವ ಆರೋಪದಡಿ ಸಿಸಿಬಿಯ ಮಹಿಳಾ ಸಂರಕ್ಷಣಾ ಘಟಕದ ಎಸಿಪಿ ಮುಧವಿ ಅವರನ್ನು ಅಮಾನತು ಮಾಡಲಾಗಿದೆ.

ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಿರೇನ್ ಖನ್ನಾಗೆ ಪೇದೆ ಮಲ್ಲಿಕಾರ್ಜುನ್ ಅವರಿಂದ ರಾತ್ರಿ ವೇಳೆ ಮೊಬೈಲ್ ನೀಡಿ ಸಹಕರಿಸಿದ್ದರು. ಖನ್ನಾ ಬಳಿ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಪ್ರಕರಣದ ತನಿಖೆ ನಡೆಯುತ್ತಿದ್ದ ಸಮಯದಲ್ಲಿ ಆರೋಪಿಗಳು ಹಾಗೂ ಅವರ ಸಹಚರರೊಂದಿಗೆ ಮುಧವಿ ಸಂಪರ್ಕದಲ್ಲಿದ್ದರು. ತನಿಖೆಯ ಮಾಹಿತಿ ಸೋರಿಕೆ ಮಾಡುತ್ತಿರುವುದಾಗಿ ತಿಳಿದು ಬಂದಿದ್ದು, ಮುಧವಿ ಹಾಗೂ ಪೇದೆ ಮಲ್ಲಿಕಾರ್ಜುನ್ ಇಬ್ಬರನ್ನೂ ಅಮಾನತು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT