ಶನಿವಾರ, ಸೆಪ್ಟೆಂಬರ್ 18, 2021
24 °C

ಅಂತರರಾಷ್ಟ್ರೀಯ ಡ್ರಗ್ಸ್ ಪ್ರಕರಣ: ಭಟ್ಕಳದ ಮ್ಯಾಶಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಂತರರಾಷ್ಟ್ರೀಯ ಡ್ರಗ್ಸ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದು ಬಚಾವಾಗಿದ್ದ ಆರೋಪಿ ಭಟ್ಕಳದ ಶರೀಫ್ ಹಸನ್ ಮಸೂರಿ ಅಲಿಯಾಸ್ ಮ್ಯಾಶಿಯನ್ನು, ಮತ್ತೊಂದು ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

‘ಡ್ರಗ್ಸ್ ಪ್ರಕರಣದಲ್ಲಿ 19ನೇ ಆರೋಪಿ ಆಗಿದ್ದ ಮ್ಯಾಶಿ, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ. ನಿರೀಕ್ಷಣಾ ಜಾಮೀನು ಪಡೆದು ಬಂಧನದಿಂದ ತಪ್ಪಿಸಿಕೊಂಡಿದ್ದ. ಆದರೆ, ಆತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ’ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಮಂಗಳವಾರ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ 14 ದಿನ ಆತನನ್ನು ಕಸ್ಟಡಿಗೆ ಪಡೆಯಲಾಗಿದೆ’ ಎಂದೂ ಅಧಿಕಾರಿಯೊಬ್ಬರು ಹೇಳಿದರು.

‘ಆರೋಪಿ ಆದಿತ್ಯ ಆಳ್ವ ಸ್ನೇಹಿತನಾಗಿದ್ದ ಮ್ಯಾಶಿ, 2016ರಿಂದಲೇ ಪಾರ್ಟಿಗಳಲ್ಲಿ ಡ್ರಗ್ಸ್ ಮಾರುತ್ತಿದ್ದ. ಶಿವಪ್ರಕಾಶ್, ರವಿಶಂಕರ್, ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವೈಭವ್‌ಕುಮಾರ್ ಜೈನ್ ಹಾಗೂ ಇತರೆ ಆರೋಪಿಗಳ ಜೊತೆ ಒಟನಾಟವಿಟ್ಟುಕೊಂಡಿದ್ದ. ಅವರಿಗೆಲ್ಲ ಈತ ಡ್ರಗ್ಸ್ ಸರಬರಾಜು ಮಾಡಿದ್ದನೆಂಬುದು ತನಿಖೆಯಿಂದ ಗೊತ್ತಾಗಿತ್ತು’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು