ಡ್ರಗ್ಸ್ ಮಾರುತ್ತಿದ್ದ ರೌಡಿ ವಿರುದ್ಧ ಗೂಂಡಾ ಕಾಯ್ದೆ
ಬೆಂಗಳೂರು: ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದ ಹಾಗೂ ಪದೇ ಪದೇ ಅಪರಾಧ ಕೃತ್ಯಗಳನ್ನು ಎಸಗಿ ಜನರನ್ನು ಬೆದರಿಸುತ್ತಿದ್ದ ರೌಡಿ ಕಾರ್ತಿಕ್ ಅಲಿಯಾಸ್ ಉಲ್ಲಾಳ ಕಾರ್ತಿಕ್ (33) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ಜ್ಞಾನಭಾರತಿ ಠಾಣೆಯ ರೌಡಿ ಪಟ್ಟಿಯಲ್ಲಿ ಕಾರ್ತಿಕ್ ಹೆಸರಿದೆ. ನಗರದ ಹಲವು ಠಾಣೆಗಳಲ್ಲಿ ಆತನ ವಿರುದ್ಧ 21 ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ, ಗೂಂಡಾ ಕಾಯ್ದೆಯಡಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.
‘ಪಶ್ಚಿಮ ವಿಭಾಗ ಠಾಣೆಗಳ ವ್ಯಾಪ್ತಿಯಲ್ಲಿರುವ ಕೆಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ರೌಡಿ ಕಾರ್ತಿಕ್, ಡ್ರಗ್ಸ್ ಮಾರುತ್ತಿದ್ದ. ಆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಆತನನ್ನು ಬಂಧಿಸಲಾಗಿತ್ತು. ಐದು ಕೊಲೆ ಪ್ರಕರಣ, ಮೂರು ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆತ ಆರೋಪಿ ಎಂಬುದು ತನಿಖೆಯಿಂದ ತಿಳಿಯಿತು’ ಎಂದೂ ತಿಳಿಸಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.