ಶನಿವಾರ, ಜನವರಿ 16, 2021
28 °C

ಡ್ರಗ್ಸ್ ಮಾರಾಟ; ಇಬ್ಬರ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಾತ್ರೆ ಹಾಗೂ ಸ್ಟಿಕರ್ ರೂಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ವಿದೇಶಿ ಪ್ರಜೆಗಳನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

‘ಕ್ರಿಷ್ಟೈನ್ ಕಬೊಂಗ್ ಮಸೇಬ್ (25) ಹಾಗೂ ಜೇಯನ್ ಪೌಲ್ (34) ಬಂಧಿತರು. ಅವರಿಂದ ₹ 6 ಲಕ್ಷ ಮೌಲ್ಯದ 96 ಎಲ್‌ಎಸ್‌ಡಿ ಸ್ಟಿಕರ್‌ಗಳು ಹಾಗೂ ಮಾತ್ರೆ ರೂಪದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

’ಹೊಸ ವರ್ಷಾಚರಣೆಗೆ ಮಾರಾಟ ಮಾಡಲೆಂದು ಆರೋಪಿಗಳು ಡ್ರಗ್ಸ್ ಸಂಗ್ರಹಿಸಿಟ್ಟುಕೊಂಡಿದ್ದರು. ಕೆಲವರಿಗೆ ಮಾರಾಟ ಮಾಡಿದ್ದರು. ಈ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ಬನಶಂಕರಿ 2ನೇ ಹಂತದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿ ಕೊಂಡರು’ ಎಂದೂ ತಿಳಿಸಿದರು.

‘ಶಿಕ್ಷಣ ಮತ್ತು ವ್ಯಾಪಾರ ವೀಸಾದಡಿ ನಗರಕ್ಕೆ ಬಂದಿದ್ದ ಆರೋಪಿಗಳು, ಹಲ ವರ್ಷಗಳಿಂದ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದರು. ಅದರಿಂದ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು’ ಎಂದೂ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು