ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 30 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

Last Updated 29 ನವೆಂಬರ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ನೈಜೀರಿಯಾ ಪ್ರಜೆಯೊಬ್ಬರಿಂದ ಡ್ರಗ್ಸ್ ಖರೀದಿಸಿ ತರುತ್ತಿದ್ದ ಆರೋಪಿಗಳು, ಎಲೆಕ್ಟ್ರಾನಿಕ್ ಸಿಟಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ದಾಳಿ ಮಾಡಿ ಬಂಧಿಸಲಾಗಿದೆ. ಆರೋಪಿಗಳ ಹೆಸರು ಗೋಪ್ಯವಾಗಿರಿಸಲಾಗಿದೆ’ ಎಂದು ಸಿಸಿಬಿ ಪೊಲೀಸ್ ಮೂಲಗಳು ಹೇಳಿವೆ.

‘ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿಗಳ ಉದ್ಯೋಗಿಗಳು ಆರೋಪಿಗಳ ಬಳಿ ಡ್ರಗ್ಸ್ ಖರೀದಿಸುತ್ತಿದ್ದರು. ದಾಳಿ ವೇಳೆ ಆರೋಪಿಗಳಿಂದ ₹ 30 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.’

‘ಎಂಡಿಎಂಎ ಮಾತ್ರೆಗಳು, ಚರಸ್ ಹಾಗೂ ಗಾಂಜಾ ಪತ್ತೆ ಆಗಿದೆ. ಆರೋಪಿಗಳ ಜೊತೆ ಮತ್ತಷ್ಟು ಮಂದಿ ಭಾಗಿಯಾಗಿದ್ದು, ತನಿಖೆ ಮುಂದುವರಿದಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT