ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಮಾರಾಟ; ಐವರ ಬಂಧನ

ಸಿಸಿಬಿ ಕಾರ್ಯಾಚರಣೆ; ₹ 30 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ
Last Updated 10 ಜೂನ್ 2021, 22:02 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ ಜಾರಿಯಲ್ಲಿರುವ ನಗರದಲ್ಲಿ ಅಗತ್ಯ ವಸ್ತುಗಳ ಖರೀದಿಗಾಗಿ ವಿನಾಯಿತಿ ನೀಡಿದ್ದ ಅವಧಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮತ್ತೆ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ಕಾಡುಗೋಡಿ ಠಾಣೆ ವ್ಯಾಪ್ತಿಯ ಕನ್ನಮಂಗಲದಲ್ಲಿ ನೈಜೀರಿಯಾ ಪ್ರಜೆ ಸೇರಿ ಆರು ಮಂದಿಯನ್ನು ಇತ್ತೀಚೆಗಷ್ಟೇ ಬಂಧಿಸಲಾಗಿತ್ತು. ಈಗ ಅದೇ ಜಾಲದ ಐವರು ಆರೋಪಿಗಳನ್ನು ಸೆರೆಹಿಡಿಯಲಾಗಿದೆ’ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಬಯಾನ್ ಅನ್ಸಾರಿ (26), ಅರ್ನಾಲ್ಡ್ ಪಸ್ಕಲ್ ಡಿಸೋಜ (27), ಅನಿರುದ್ಧ ವೆಂಕಟಾಚಲಂ (23), ಕನಿಷ್ಕ್ ರೆಡ್ಡಿ (23) ಹಾಗೂ ಕೆ. ಸಂತೋಷ್ (28) ಬಂಧಿತರು. ಅವರಿಂದ ₹ 30 ಲಕ್ಷ ಮೌಲ್ಯದ ಡ್ರಗ್ಸ್ (ಎಂಡಿಎಂಎ, ಎಕ್ಸ್‌ಟೆಸ್ಸಿ ಮಾತ್ರೆಗಳು, ಎಲ್‌ಎಸ್‌ಡಿ ಕಾಗದ ಚೂರು) ಜಪ್ತಿ ಮಾಡಲಾಗಿದೆ’ ಎಂದೂ ಅವರು ತಿಳಿಸಿದರು.

ಡಾರ್ಕ್‌ ವೆಬ್ ಮೂಲಕ ಖರೀದಿ; ‘ತಂತ್ರಜ್ಞಾನ ಬಳಕೆಯಲ್ಲಿ ಪರಿಣಿತರಾಗಿದ್ದ ಆರೋಪಿಗಳು, ಡಾರ್ಕ್ ವೆಬ್ ಹಾಗೂ ಆ್ಯಪ್‌ಗಳ ಮೂಲಕ ಅಂತರರಾಷ್ಟ್ರೀಯ ಪೆಡ್ಲರ್‌ಗಳನ್ನು ಸಂಪರ್ಕಿಸಿ ಡ್ರಗ್ಸ್ ಖರೀದಿಸುತ್ತಿದ್ದರು. ಇದಕ್ಕಾಗಿ ಬಿಟ್ ಕಾಯಿನ್ ಬಳಸುತ್ತಿದ್ದರು’ ಎಂದೂ ಅಧಿಕಾರಿ ಹೇಳಿದರು.

‘ಲಾಕ್‌ಡೌನ್‌ ಇರುವುದರಿಂದ ನಿತ್ಯವೂ ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಇದೇ ಅವಧಿಯಲ್ಲಿ ನಗರದಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದರು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT