ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್ ಬುಕ್ಕಿಂಗ್ ಪಡೆದು ಡ್ರಗ್ಸ್ ಮಾರಾಟ: ಆರೋಪಿ ಆಸೀಫ್ ಬಂಧನ

Last Updated 8 ನವೆಂಬರ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮೊಬೈಲ್ ಆ್ಯಪ್‌ಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಆನ್‌ಲೈನ್‌ ಬುಕ್ಕಿಂಗ್ ಪಡೆದು ಡ್ರಗ್ಸ್ ಮಾರುತ್ತಿದ್ದ ಜಾಲವನ್ನು ದೇವರಜೀವನಹಳ್ಳಿ (ಡಿ.ಜೆ. ಹಳ್ಳಿ) ಪೊಲೀಸರು ಭೇದಿಸಿದ್ದು, ಆರೋಪಿ ಆಸೀಫ್ ಎಂಬುವರನ್ನು ಬಂಧಿಸಿದ್ದಾರೆ.

‘ಕೇರಳದ ಆಸೀಫ್, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ. ಡ್ರಗ್ಸ್ ಮಾರಾಟವನ್ನೇ ವೃತ್ತಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದ. ಈತನನ್ನು ಬಂಧಿಸಿ ₹ 5.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆಂಧ್ರಪ್ರದೇಶದಿಂದ ಡ್ರಗ್ಸ್ ತರಿಸುತ್ತಿದ್ದ ಆರೋಪಿ, ತಾನು ವಾಸವಿದ್ದ ಮನೆಯಲ್ಲಿ ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ. ಮೊಬೈಲ್ ಆ್ಯಪ್‌ಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಗ್ರಾಹಕರನ್ನು ಸಂಪರ್ಕಿಸಿ, ಗಾಂಜಾ ಖರೀದಿಗೆ ಮುಂಗಡ ಹಣ ಪಡೆದು ಬುಕ್ಕಿಂಗ್ ಪಡೆಯುತ್ತಿದ್ದ.’

‘ಆಹಾರ ಡೆಲಿವರಿ ಬಾಯ್ ಸೋಗಿನಲ್ಲಿ ಗ್ರಾಹಕರ ಸ್ಥಳಗಳಿಗೆ ಹೋಗಿ ಗಾಂಜಾ ಪೊಟ್ಟಣ ನೀಡುತ್ತಿದ್ದ. ರಸ್ತೆ ಅಕ್ಕ–ಪಕ್ಕದ ಪೊದೆಗಳಲ್ಲೂ ಡ್ರಗ್ಸ್ ಪೊಟ್ಟಣ ಬಚ್ಚಿಟ್ಟು ಮಾರುತ್ತಿದ್ದ’ ಎಂದು ತಿಳಿಸಿವೆ.

‘ಆಸೀಫ್ ಜೊತೆ ಮತ್ತಷ್ಟು ಮಂದಿ ಕೃತ್ಯದಲ್ಲಿ ಶಾಮೀಲಾಗಿರುವ ಮಾಹಿತಿ ಇದೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT