ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯಲ್ಲಿ ಡ್ರಗ್ಸ್ ಸಂಗ್ರಹ: ಪೊಲೀಸರ ದಾಳಿ

Published 7 ಡಿಸೆಂಬರ್ 2023, 16:18 IST
Last Updated 7 ಡಿಸೆಂಬರ್ 2023, 16:18 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ವಡೇರಹಳ್ಳಿಯಲ್ಲಿರುವ ಮನೆಯೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, ₹ 5 ಲಕ್ಷ ಮೌಲ್ಯದ ಡ್ರಗ್ಸ್ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

‘ನೈಜೀರಿಯಾ ಪ್ರಜೆ ಇಮಾನ್ಯೂಲ್ ಲೊಟೊಚುಕ್ವೊ ಅಲಿಯಾಸ್ ಜಾನ್ (27) ತಮ್ಮ ಬಾಡಿಗೆ ಮನೆಯಲ್ಲಿ ಡ್ರಗ್ಸ್ ಇಟ್ಟುಕೊಂಡಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ, ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ, ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಪರಿಚಯಸ್ಥರಿಂದ ಡ್ರಗ್ಸ್ ಖರೀದಿಸಿ ತಂದು ಮನೆಯಲ್ಲಿ ಇಟ್ಟುಕೊಂಡಿದ್ದ. ಚಿಕ್ಕ ಪೊಟ್ಟಣಗಳಲ್ಲಿ ಡ್ರಗ್ಸ್ ತುಂಬಿ ಗ್ರಾಹಕರಿಗೆ ಮಾರುತ್ತಿದ್ದ’ ಎಂದು ತಿಳಿಸಿದರು.

‘ಆರೋಪಿಯಿಂದ 261 ಗ್ರಾಂ ಕೊಕೇನ್, ₹ 57 ಸಾವಿರ ನಗದು, 2 ಮೊಬೈಲ್, ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT