ಬೆಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ಡ್ರಗ್ಸ್ ಮಾರಲು ತಯಾರಿ ನಡೆಸುತ್ತಿದ್ದ ಇಬ್ಬರನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದು, ಅವರಿಂದ ₹ 1 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘ನೈಜೀರಿಯಾದ ಡಾನ್ಚೋಕ್ಸ್ ಅಲಿಯಾಸ್ ಟಮ್ ಟಮ್ (39) ಹಾಗೂ ಸೇಲಿಸ್ಟಿನ್ ಅನುಗ್ವಾ (40) ಬಂಧಿತರು. ಉದ್ಯೋಗ ವೀಸಾದಡಿ ನಗರಕ್ಕೆ ಬಂದಿದ್ದ ಅವರು ಅವಧಿ ಮುಗಿದರೂ ತಮ್ಮ ದೇಶಕ್ಕೆ ಮರಳಿರಲಿಲ್ಲ. ನಗರದಲ್ಲೇ ಡ್ರಗ್ಸ್ ದಂಧೆ ನಡೆಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಕ್ರಿಸ್ಮಸ್ ಹಬ್ಬ ಹಾಗೂ ಹೊಸ ವರ್ಷಾಚರಣೆಗೆ ಮಾರಲು ಡ್ರಗ್ಸ್ ಸಂಗ್ರಹಿಸಿದ್ದರು. ಮಾಹಿತಿ ಆಧರಿಸಿ ಸಿ.ವಿ.ರಾಮನ್ನಗರದ ಬಾಗಮನೆ ಟೆಕ್ಪಾರ್ಕ್ ಬಳಿ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ತಪ್ಪೊಪ್ಪಿಕೊಂಡರು. ಅವರ ಕಾರಿನಲ್ಲಿ, 3,300 ಎಂಡಿಎಂಎ ಮಾತ್ರೆಗಳು ಹಾಗೂ 600 ಗ್ರಾಂ ಮಾದಕ ವಸ್ತು ಪತ್ತೆಯಾಯಿತು. ಕಾರನ್ನೂ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.

ಡಾರ್ಕ್ನೆಟ್ ಮೂಲಕ ವ್ಯವಹಾರ: ‘ಡಾರ್ಕ್ನೆಟ್ ಬಳಸುವುದರಲ್ಲಿ ಪರಿಣತಿ ಪಡೆದಿದ್ದ ಆರೋಪಿಗಳು, ಅದರ ಮೂಲಕ ವ್ಯವಹಾರ ನಡೆಸುತ್ತಿದ್ದರು. ಅಂತರರಾಷ್ಟ್ರೀಯ ಪೆಡ್ಲರ್ಗಳನ್ನು ಅದರ ಮೂಲಕ ಸಂಪರ್ಕಿಸುತ್ತಿದ್ದ ಆರೋಪಿಗಳು, ಪಾರ್ಸೆಲ್ನಲ್ಲಿ ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು’ ಎಂದರು.

ಹಬ್ಬಕ್ಕೆ ಬೇಡಿಕೆ: ‘ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಡ್ರಗ್ಸ್ ಬೇಕೆಂದು ಹಲವರು ಬೇಡಿಕೆ ಇಟ್ಟಿದ್ದರು.ಪೂರಕವಾಗಿ ಸಿದ್ಧತೆ ಮಾಡಿಕೊಂಡಿದ್ದರು’ ಎಂದು ತಿಳಿಸಿದರು.

‘ಕೆಲ ಕಾಲೇಜು ಯುವಕ–ಯುವತಿಯರು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳು ಆರೋಪಿಗಳ ಗ್ರಾಹಕರಾಗಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ. ಡ್ರಗ್ಸ್ ಮಾರಿ ಹಣ ಗಳಿಸುತ್ತಿದ್ದ ಆರೋಪಿಗಳು, ಐಷಾರಾಮಿ ಜೀವನ ನಡೆಸುತ್ತಿದ್ದರು. ಮತ್ತಷ್ಟು ಮಂದಿ ಜಾಲದಲ್ಲಿರುವ ಶಂಕೆ ಇದ್ದು, ತನಿಖೆ ಮುಂದುವರಿದಿದೆ’ ಎಂದೂ ತಿಳಿಸಿದರು.

ಬಹುಮಾನ: ಆರೋಪಿಗಳನ್ನು ಬಂಧಿಸಿರುವ ಪೊಲೀಸರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ₹40 ಸಾವಿರ ಬಹುಮಾನ ಘೋಷಿಸಿದ್ದಾರೆ.

₹ 5 ಲಕ್ಷ ಮೌಲ್ಯದ ಡ್ರಗ್ಸ್ ವಶ
ಡ್ರಗ್ಸ್ ವಿರುದ್ಧ ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದು, ₹ 5 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ನೈಜೀರಿಯಾದ ಯುಡೆಯುಡ್ಜಾ (33), ಕೇರಳದ ಕೆ.ಪ್ರಸೋನ್ (27) ಹಾಗೂ ಕೆ.ವಿ. ಅನಂತ್ಚಂದ್ರನ್ ಎಂಬುವರನ್ನು ಬಂದಿಸಿದ್ದಾರೆ.

‘ಯಲಹಂಕ ಠಾಣೆ ವ್ಯಾಪ್ತಿಯ ಬಾಲಾಜಿ ಲೇಔಟ್ ಬಳಿ ಕಾರಿನಲ್ಲಿ ಬಂದಿದ್ದ ಆರೋಪಿಗಳು, ಕೆಲ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಅವರಿಂದ 100 ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಲಾಯಿತು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.