ಗುರುವಾರ , ಸೆಪ್ಟೆಂಬರ್ 23, 2021
27 °C

₹4 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್ ಜಾಲದ ವಿರುದ್ಧ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಎಂ.ಜಿ.ರಸ್ತೆಯ ಕಟ್ಟಡವೊಂದರ ಬಳಿ ಮಾದಕ ವಸ್ತುಗಳಾದ ಎಲ್‍ಎಸ್‍ಡಿ ಪೇಪರ್, ಎಕ್ಸ್‌ಟೆಸಿ ಮಾತ್ರೆಗಳು ಹಾಗೂ ಟಿಎಚ್‍ಸಿ ಜೆಲ್ಲಿಗಳನ್ನು ಮಾರುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಕೊತ್ತನೂರಿನ ಜಾನ್ ನಿಕೋಲಸ್ (21) ಹಾಗೂ ಜೆ.ಪಿ.ನಗರದ ಇರ್ಫಾನ್ ಶೇಖ್ (29) ಬಂಧಿತರು.

ಬಂಧಿತರಿಂದ ₹4 ಲಕ್ಷ ಬೆಲೆ ಬಾಳುವ 50 ಟಿಎಚ್‍ಸಿ ಜೆಲ್ಲಿಗಳು, 34 ಎಕ್ಸ್‌ಟೆಸಿ ಮಾತ್ರೆಗಳು ಹಾಗೂ 27 ಎಲ್‍ಎಸ್‍ಡಿ ಸ್ಟ್ರಿಪ್ಸ್, ಎರಡು ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು