ಶುಕ್ರವಾರ, ಅಕ್ಟೋಬರ್ 23, 2020
22 °C

ಡ್ರಗ್ಸ್; ಮತ್ತಿಬ್ಬರ ಹೇಳಿಕೆ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಮತ್ತಿಬ್ಬರನ್ನು ಮಂಗಳವಾರ ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು, ಅವರ ಹೇಳಿಕೆ ಪಡೆದು ಬಿಟ್ಟು ಕಳುಹಿಸಿದ್ದಾರೆ.

‘ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಜೊತೆ ಒಡನಾಟ ಹೊಂದಿದ್ದ ಅನುಮಾನದಡಿ ಜೋಯೆಬ್ ಹಾಗೂ ಆನಂದ್ ಎಂಬುವರನ್ನು ಕಚೇರಿ ಕರೆತಂದು ವಿಚಾರಣೆ ನಡೆಸಲಾಯಿತು. ನಂತರ ಅವರಿಬ್ಬರನ್ನು ನ್ಯಾಯಾಧೀಶರ ಬಳಿ ಕರೆದೊಯ್ದು ಹೇಳಿಕೆ ದಾಖಲಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

‘‌ಆರೋಪಿಗಳು ಆಯೋಜಿಸುತ್ತಿದ್ದ ಪಾರ್ಟಿಗಳಲ್ಲಿ ಆರೋಪಿ ಜೋಯೆಬ್ ಹಾಗೂ ಆನಂದ್ ಪಾಲ್ಗೊಂಡಿದ್ದರು. ಅವರಿಬ್ಬರಿಗೆ ನಟಿ ಸಂಜನಾ ಗಲ್ರಾನಿ, ವೈಭವ್ ಜೈನ್ ಹಾಗೂ ಇತರೆ ಆರೋಪಿಗಳ ಒಡನಾಟವಿದ್ದ ಬಗ್ಗೆ ಪುರಾವೆಗಳು ಸಿಕ್ಕಿದ್ದವು. ಯಾವ ರೀತಿಯ ಒಡನಾಟವೆಂಬ ಬಗ್ಗೆ ಹೇಳಿಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು